ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಕಾಟೇಜ್ ಗೆ ಬೆಂಕಿ
ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರ ಕಾಟೇಜ್ನಲ್ಲಿ ಬುಧವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಹಾಗೂ ಕೆಆರ್ಪಿಪಿ ಅಧ್ಯಕ್ಷ ಜನಾರ್ದನ ರೆಡ್ಡಿ ಅವರ ಕಾಟೇಜ್ನಲ್ಲಿ ಬುಧವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಗಂಗಾವತಿ ತಾಲೂಕಿನ ಪಂಪಾಸರೋವರ ಬಳಿ ಇರುವ ಕಾಟೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇದು ಕಿಡಿಗೇಡಿಗಳ ಕೃತ್ಯ ಇರಬಹುದು ಎಂದು ರೆಡ್ಡಿ ಬೆಂಬಲಿಗರು ಶಂಕೆ ವ್ಯಕ್ತಪಡಿಸಿದ್ದಾರೆ.
ರೆಡ್ಡಿ ಅವರ ಖಾಲಿ ಕಾಟೇಜ್ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರಬಹುದು ಎಂಬ ಅನುಮಾನ ಅವರ ಅಭಿಮಾನಿಗಳಲ್ಲಿ ಮೂಡಿದೆ.
ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ.
ಖಾಲಿ ಕಾಟೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಆಸ್ತಿ ಹಾನಿಯ ಹೊರತಾಗಿ ಯಾವುದೇ ಜೀವ ಹಾನಿ ಅಥವಾ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.