ರಾಜ್ಯ

ಹೊಸಕೋಟೆ ಕಲುಷಿತ ಆಹಾರ ಸೇವನೆ: ಅಸ್ವಸ್ಥರ ಸಂಖ್ಯೆ 217ಕ್ಕೆ ಏರಿಕೆ

Manjula VN

ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ಕಲುಷಿತ ಆಹಾರ ಸೇವಿಸಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 135 ರಿಂದ 217ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 35 ರಿಂದ 39 ಕ್ಕೆ ಏರಿದೆ. ಹೊಸಕೋಟೆಯ ಎರಡು ದೇವಸ್ಥಾನಗಳಲ್ಲಿ ನೀಡಲಾದ ಪ್ರಸಾದವೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಪ್ರಸಾದ ಸೇವಿಸಿದ ಭಕ್ತರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಾದವರ ನಂತರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಒಳರೋಗಿಗಳ ಸಂಖ್ಯೆ ಈಗ 135ರಿಂದ 217ಕ್ಕೆ ಏರಿಕೆಯಾಗಿದೆ. ICU ನಲ್ಲಿರುವ ರೋಗಿಗಳ ಸಂಖ್ಯೆ 35 ರಿಂದ 39 ಕ್ಕೆ ಏರಿದೆ. ICU ನಲ್ಲಿರುವ 39 ರಲ್ಲಿ ಇಬ್ಬರು 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ದೀರ್ಘಕಾಲಿಕ ರೋಗದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ಎಲ್ಲಾ 217 ಮಂದಿ ಅಸ್ವಸ್ಥರೂ ಹೊಸಕೋಟೆ ಮತ್ತು ಬೆಂಗಳೂರಿನ ಐದು ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆಂದು ರಾಜ್ಯ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ (ಸಿಎಂಡಿ) ಡಾ.ತ್ರಿವೇಣಿ ಅವರು ಮಹಿತಿ ನೀಡಿದ್ದಾರೆ.

ಈ ಸಂಖ್ಯೆ ಮತ್ತಷ್ಟು ಹೆಚ್ಚಾದರೆ ಬೆಂಗಳೂರಿನ ಸಿವಿ ರಾಮನ್ ನಗರದ ಜನರಲ್ ಆಸ್ಪತ್ರೆ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲು ಸಿದ್ಧತೆಗಳ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದವರ ಆರೋಗ್ಯ ಸುಧಾರಿಸುತ್ತಿದೆ, “ನಾವು ಆಹಾರ ಮಾದರಿಗಳು ಮತ್ತು ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರವೇ ನಿಖರ ಕಾರಣಗಳು ತಿಳಿದುಬರಲಿದೆ. ಗುರುವಾರ ವರದಿ ಬರುವ ನಿರೀಕ್ಷೆಗಳಿವೆ ಎಂದು ತಿಳಿಸಿದ್ದಾರೆ.

SCROLL FOR NEXT