ಸಂಗ್ರಹ ಚಿತ್ರ 
ರಾಜ್ಯ

ಮಳೆ ಕೊರತೆ: ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಸಾಧ್ಯತೆ!

ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಮುಂಬರುವ ಬೇಸಿಗೆ ವೇಳೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಮುಂಬರುವ ಬೇಸಿಗೆ ವೇಳೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಬಹುತೇಕ ಜಲಾಶಯಗಳ ಒಳಹರಿವಿನ ಮಟ್ಟ ಕುಸಿದ್ದು, ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ, ಹೀಗಾಗಿ ಲಭ್ಯವಿರುವ ನೀರನ್ನು ವಿವೇಚನಾಯುಕ್ತರಾಗಿ ಬಳಕೆ ಮಾಡುವಂತೆ ಜನರಿಗೆ ತಜ್ಞರು ಸಲಹೆ ನೀಡಿದ್ದಾರೆ.

ಬೇಸಿಗೆ ತ್ತಿರ ಬರುತ್ತಿದ್ದು, ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಹಾಗೂ ಕೈಗಾರಿಕಾ ಉದ್ದೇಶಗಳಿಗಾಗಿ ಮಾತ್ರ ಬಳಕೆ ಮಾಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಇದರಿಂದಾಗಿ ಮುಂಗಾರು ವೈಫಲ್ಯದಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ,  ಮುಂದಿನ ದಿನಗಳಲ್ಲಿ ಕೃಷಿಗೆ ನೀರು ಸಿಗದೆ ಮತ್ತಷ್ಟು ಸಂಕಷ್ಟಕ್ಕೆ ಸಿಲುವ ಸಾಧ್ಯತೆಗಳಿವೆ.

ಕೆಎಸ್‌ಎನ್‌ಡಿಎಂಸಿ ಪ್ರಕಾರ, 895 ಟಿಎಂಸಿ ಅಡಿ ನೀರಿನ ಸಾಮರ್ಥ್ಯವುಳ್ಳ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಈಗ ಕೇವಲ 394 ಟಿಎಂಸಿ ಅಡಿ ನೀರು ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯಗಳಲ್ಲಿ 668 ಟಿಎಂಸಿ ಅಡಿ ನೀರಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ಒಟ್ಟು ಸಾಮರ್ಥ್ಯ 114 ಟಿಎಂಸಿ ಅಡಿಯಷ್ಟಿದ್ದರೆ, ಇಲ್ಲಿಯವರೆಗೆ ಕೇವಲ 52 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ.. ಕಳೆದ ವರ್ಷ ಇದೇ ಅವಧಿಯಲ್ಲಿ 83 ಟಿಎಂಸಿ ಅಡಿ ನೀರಿತ್ತು ಎಂದು ಹೇಳಿದೆ.

 ಜಲಾಶಯಗಳು ತುಂಬಲು ಮುಂಬರುವ ತಿಂಗಳುಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಬೇಕು. ಆದರೆ, ಅಂತಹ ಪರಿಸ್ಥಿತಿಗಳಿಲ್ಲ ಎಂದು ವಿಪತ್ತು ನಿರ್ವಹಣಾ ವಿಭಾಗವು ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಮಳೆ ಕೊರತೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿನ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಬಿಕ್ಕಟ್ಟನ್ನು ನಿವಾರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಎದುರಾಗಬಹುದು ಎಂದ ಮೂಲಗಳು ತಿಳಿಸಿವೆ.

ಕುಡಿಯುವ ಮತ್ತು ನೀರಾವರಿ ಉದ್ದೇಶಗಳಿಗಾಗಿ ಅಂತರ್ಜಲವನ್ನು ಅವಲಂಬಿಸಿರುವ ಸ್ಥಳಗಳ ಮೇಲೂ ಬಿಕ್ಕಟ್ಟು ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಲಾಗುತ್ತಿದೆ.

ನೀರಿನ ಕೊರತೆಯಿಂದಾಗ ರೈತರು ಬೋರ್‌ವೆಲ್‌ಗಳನ್ನು ಕೊರೆಯುವ ಮೂಲಕ ಅಂತರ್ಜಲ ಮೂಲವನ್ನು ಅತಿಯಾಗಿ ಬಳಸಿಕೊಂಡಿದ್ದಾರೆಂದು ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಖಾಸಗಿ ನೀರಿನ ಟ್ಯಾಂಕರ್ ಆಪರೇಟರ್‌ಗಳ ಸೇವೆಯನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಕೆಎಸ್‌ಎನ್‌ಡಿಎಂಸಿಯ ಮಾಜಿ ನಿರ್ದೇಶಕ ಮತ್ತು ವೈಜ್ಞಾನಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಜಿಎಸ್ ಶ್ರೀನಿವಾಸ್ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಹಿಗಾಗಿ ಹೆಚ್ಚು ನೀರು ಅಗತ್ಯವಿರುವ ಬೆಳೆಗಳನ್ನು ಬೆಳೆಯದಂತೆ ಈ ಹಿಂದೆಯೇ ರೈತರಿಗೆ ಮನವಿ ಮಾಡಲಾಗಿತ್ತು. ಇದೀಗ ಲಭ್ಯವಿರುವ ನೀರನ್ನು ವಿವೇಜನಾಯುಕ್ತವಾಗಿ ಬಳಕೆ ಮಾಡಬೇಕಿದ್ದು, ನೀರು ಸೋರಿಕೆ, ವ್ಯರ್ಥವಾಗದಂತೆ ಮಾಡಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT