ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್ JN.1 ರೂಪಾಂತರ: ಅಗತ್ಯ ಮುಂಜಾಗ್ರತಾ ಕ್ರಮ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಕೋವಿಡ್ JN.1 ರೂಪಾಂತರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. 

ಬೆಂಗಳೂರು: ಕೋವಿಡ್ JN.1 ರೂಪಾಂತರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. 

ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದ್ದು ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗು ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತವಾಗಿ ಸೂಕ್ತ ಕೋವಿಡ್ ಮಾಸ್ಕ್ ಧರಿಸಲು ಕೋರಲಾಗಿದೆ.

ಅಲ್ಲದೇ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

ಪ್ರಸ್ತುತ, ರಾಜ್ಯದಲ್ಲಿ ಡಿಸೆಂಬರ್ 26ರವರೆಗೆ 464 ಸಕ್ರಿಯ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 376 ಪ್ರಕರಣಗಳು ವರದಿಯಾಗಿವೆ. ಒಟ್ಟು 74 ಖಚಿತ ಪ್ರಕರಣಗಳಲ್ಲಿ 57 ಪ್ರಕರಣಗಳು ಮತ್ತು 9 ಮರಣ ಪ್ರಕರಣಗಳಲ್ಲಿ 4 ಬೆಂಗಳೂರು ನಗರಕ್ಕೆ ಸೇರಿವೆ. 

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನಸಂದಣಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಜನಸಂದಣಿಯಾಗುವುದನ್ನು ಗಮನದಲ್ಲಿಟ್ಟುಕೊಂಡು, ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ  ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದರ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel