ಉಳ್ಳಾಲ: ಬೀಚ್ ಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು, ಓರ್ವ ಸಾವು, ಮತ್ತೋರ್ವ ನಾಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ಗೆ ತೆರಳಿದ್ದ ಇಬ್ಬರು ಯುವಕರು ಸಮುದ್ರ ಪಾಲಾಗಿದ್ದು, ಈ ಪೈಕಿ ಓರ್ವ ಸಾವನ್ನಪ್ಪಿದ್ದರೆ ಮತ್ತೋರ್ವ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ಗೆ ತೆರಳಿದ್ದ ಇಬ್ಬರು ಯುವಕರು ಸಮುದ್ರ ಪಾಲಾಗಿದ್ದು, ಈ ಪೈಕಿ ಓರ್ವ ಸಾವನ್ನಪ್ಪಿದ್ದರೆ ಮತ್ತೋರ್ವ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಈ ಪೈಕಿ ಸಲ್ಮಾನ್ (19) ಎಂಬಾತನ ಮೃತ ದೇಹ ಸಿಕ್ಕಿದ್ದು, ಬಶೀರ್ (23) ಎಂಬಾತನಿಗಾಗಿ ಶೋಧ ಮುಂದುವೆರೆದಿದೆ.
ಮೂಲಗಳ ಪ್ರಕಾರ ಕುಟುಂಬ ಸಮೇತ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದ ಇವರು ಬಳಿಕ ಬೀಚ್ ಗೆ ತೆರಳಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಶೀರ್, ಸಲ್ಮಾನ್ ಹಾಗೂ ಸೈಫ್ ಆಲಿ (27) ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಈ ವೇಳೆ ಸ್ಥಳೀಯ ಈಜುಗಾರರು ಸಲ್ಮಾನ್ ಹಾಗೂ ಸೈಫುಲ್ಲಾ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಶೀರ್ ನೀರಿನಲ್ಲಿ ಮುಳುಗಿ ನಾಪತ್ತೆ ಆಗಿದ್ದು, ಮೃತ ದೇಹ ಕ್ಕಾಗಿ ಶೋಧ ಮುಂದುವರಿದಿದೆ. ಅತ್ತ ಆಸ್ಪತ್ರೆಯಲ್ಲಿ ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸದ್ಯ ಸೈಫುಲ್ಲಾ ಅವರು ಚೇತರಿಸಿ ಕೊಂಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.