ಸಿದ್ದರಾಮಯ್ಯ 
ರಾಜ್ಯ

ಹಿಂದೂ ಬೇರೆ, ಹಿಂದುತ್ವ ಬೇರೆ, ನಾವು ರಾಮನನ್ನು ಪೂಜಿಸಲ್ವಾ; ಬಿಜೆಪಿಯವರದ್ದು ಡೋಂಗಿ ಹಿಂದುತ್ವ: ಸಿದ್ದರಾಮಯ್ಯ

ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿಯವರು. ನೆಹರೂ-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು.

ಬೆಂಗಳೂರು: ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿಯವರು. ನೆಹರೂ-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಕಾಂಗ್ರೆಸ್ ಜನರ ಪ್ರಗತಿಗಾಗಿ ಹುಟ್ಟಿದ ಹೋರಾಟದ ಸಿದ್ಧಾಂತ ಮತ್ತು ಚಳವಳಿ. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೂ ಬೇರೆ - ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಹರಿಹಾಯ್ದಿದ್ದಾರೆ.

ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರಿಗೆ ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಬುರುಡೆ ಬಿಡ್ತಾರೆ ಎಂದು ಲೇವಡಿ ಮಾಡಿದ್ದಾರೆ.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬೆಲ್ಲ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ, ಪ್ರಧಾನಿ ಆಗುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಮಹಾತ್ಮ ಗಾಂಧಿಯವರು ಬ್ರಿಟಿಷರನ್ನು ಅಹಿಂಸೆಯ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು.

ಬಿಜೆಪಿ, ಜನ ಸಂಘ, RSS ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ RSS ಹುಟ್ಟಿತ್ತು‌. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಂಗಿತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದು ಕರೆ ನೀಡಿದರು.

ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ.  ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ? ಸಿಎಂ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT