ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರ: ನವಜಾತ ಹೆಣ್ಣು ಶಿಶುವಿನ ಶವಪತ್ತೆ; ಮೈಮೇಲೆ ಬೀದಿ ನಾಯಿ ಕಚ್ಚಿ ಗಾಯ!

ವೆಮಗಲ್ ಪೊಲೀಸ್ ವ್ಯಾಪ್ತಿಯ ಅಚ್ಚತನಹಳ್ಳಿ ಗ್ರಾಮದಲ್ಲಿ ಗುರುವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶವದ ಮೇಲೆ ನಾಯಿ ಕಚ್ಚಿ ಗಾಯಗಳಾಗಿವೆ.

ಕೋಲಾರ: ವೆಮಗಲ್ ಪೊಲೀಸ್ ವ್ಯಾಪ್ತಿಯ ಅಚ್ಚತನಹಳ್ಳಿ ಗ್ರಾಮದಲ್ಲಿ ಗುರುವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶವದ ಮೇಲೆ ನಾಯಿ ಕಚ್ಚಿ ಗಾಯಗಳಾಗಿವೆ.

ಗುರುವಾರ ಮುಂಜಾನೆ ಮಗುವನ್ನು ರಸ್ತೆಯ ಬಳಿಯ ಪೊದೆಗೆ ಎಸೆದಿರಬಹುದು, ನಂತರ  ಬೀದಿ ನಾಯಿಗಳು ಅದನ್ನು ರಸ್ತೆಗೆ ಎಳೆದುಕೊಂಡು ಹೋಗಿರಬಹುದು ಎಂದು  ಪೊಲೀಸರು ಶಂಕಿಸಿದ್ದಾರೆ. ಶವವನ್ನು ನೋಡಿದ ಅಚ್ಚತನಹಳ್ಳಿ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೆಣ್ಣು ಮಗು ಬೇಡ ಎಂಬ ಕಾರಣಕ್ಕೆ ನವಜಾತ ಶಿಶುವನ್ನು ಕುಟುಂಬಸ್ಥರೇ ಕೊಂದು ಹಾಕಿರುವ ಶಂಕೆ ವ್ಯಕ್ತವಾಗಿದೆ.

ಮೃತದೇಹವನ್ನು ಎಸ್‌ಎನ್‌ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ವೆಮಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಚ್ಚತನಹಳ್ಳಿ ಮುಖ್ಯರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗಾಗಿ ಪಡೆದುಕೊಂಡಿದ್ದಾರೆ. ಬುಧವಾರ ಜನಿಸಿದ ಶಿಶುಗಳ ಕುರಿತು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಗಳು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್