ರಾಜ್ಯ

ಕೋವಿಡ್ JN1 ಸೋಂಕು ಹೆಚ್ಚಳ: ರಾಜ್ಯದಲ್ಲಿ ಜ.2 ರಿಂದ ಲಸಿಕೆ ಅಭಿಯಾನ ಮತ್ತೆ ಆರಂಭ

Srinivas Rao BV

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಹೆಚ್ಚಳವಾಗುತ್ತಿದ್ದು, ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ.
 
ಜ.02 ರಿಂದ ರಾಜ್ಯದಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ನೀಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವ್ಯಾಕ್ಸಿನ್ ನೀಡಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿನ ಕೋವಿಡ್ ಸೋಂಕಿನಿಂದ ಸಾವು ಸಂಭವಿಸುತ್ತಿದೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಲಸಿಕೆಯನ್ನು ಶೇ. 27% ಜನರು ಮಾತ್ರ ಪಡೆದಿದ್ದಾರೆ. ಸದ್ಯ ರಾಜ್ಯದಲ್ಲಿ ಇನ್ನು 1.5 ಕೋಟಿಗೂ ಅಧಿಕ ಜನರು ಮುನ್ನೆಚ್ಚರಿಕಾ ವ್ಯಾಕ್ಸಿನ್ ಪಡೆಯಲು ಅಹರ್ತೆ ಪಡೆದಿದ್ದಾರೆ.

ಆರೋಗ್ಯ ಇಲಾಖೆ ಮನವಿ:

ರಾಜ್ಯದಲ್ಲಿ ಈ ವರೆಗೂ 1.5 ಕೋಟಿಗೂ ಹೆಚ್ಚು ಮಂದಿ 3 ನೇ ಡೋಸ್ ಲಸಿಕೆ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ. ಒಂದಕ್ಕಿಂತ ಹೆಚ್ಚು ಆರೋಗ್ಯ ಸಮಸ್ಯೆ ಹಾಗೂ ಗಂಭೀರ ಆರೋಗ್ಯ ಸಮಸ್ಯಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

SCROLL FOR NEXT