ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯ ಸರ್ಕಾರ ನಿಯಮಗಳನ್ನು ಜಾರಿಗೊಳಿಸಲು ವಿಫಲವಾದಾಗ ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು: ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನವೀಕೃತ ಕುವೆಂಪು ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರನ್ನು ಬೆಂಬಲಿಸುವುದು ಇಂದಿನ ಅಗತ್ಯವಾಗಿದೆ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಮತ್ತಿತರರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕನ್ನಡಪರ ಹೋರಾಟಗಾರರ ಮೇಲಿನ ಸುಮಾರು 2 ಸಾವಿರ ಪ್ರಕರಣಗಳನ್ನು ವಾಪಸ್ ಪಡೆಯಲಾಗಿತ್ತು. ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕೆಂಬ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ಮಸೂದೆ-2022 ಜಾರಿಗೊಳಿಸಿದ್ದೇವು. ಇದನ್ನು ಹಾಲಿ ಸರ್ಕಾರ ಅನುಷ್ಠಾನ ಮಾಡದಿದ್ದರಿಂದ ಕನ್ನಡಪರ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ. ಕನ್ನಡ ನಿತ್ಯ ನಿರಂತರ ಆಗಬೇಕಾದರೆ ಕನ್ನಡಡಿಗರು ಜಾಗೃತರಾಗಿರಬೇಕು ಎಂದು ತಿಳಿಸಿದರು.  ಕನ್ನಡ ನಾಮಫಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸದ ಕಾರಣ ಪ್ರಸ್ತುತ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್