ರಾಜ್ಯ

ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭ; ನಗರದಲ್ಲಿ ಎಲ್ಲೆಡೆ ಖಾಕಿ ಕಟ್ಟೆಚ್ಚರ, ಈ ಮಾರ್ಗದಲ್ಲಿ ಸಂಚಾರ ನಿಷೇಧ

Manjula VN

ಬೆಂಗಳೂರು: 2024ರ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಸಜ್ಜಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಿನ್ನೆ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ನಗರದ ಡಿಸಿಪಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಭದ್ರತೆ ಕುರಿತು ಹಲವು ಸೂಚನೆಗಳನ್ನು ನೀಡಿದ್ದಾರೆ.

ಇದರಂತೆ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರಗಳಿಗೆ ಪೊಲೀಸ್ ಆಯುಕ್ತರು ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಸಿಸಿ ಕ್ಯಾಮೆರಾ, ಬ್ಯಾರಿಗೇಟ್, ವಾಚ್ ಟವರ್ ಸೇರಿ ಇತರೆ ಭದ್ರತೆಗಳ ಪರಿಶೀಲನೆ ನಡೆಸಿದರು.

ಈ ವೇಳೆ ಅಧಿಕಾರಿಗಳು ಯಾವ ಯಾವ ರಸ್ತೆಗಳನ್ನು ಬ್ಲಾಕ್ ಮಾಡಲಾಗುತ್ತೆ ಎನ್ನುವ ಕುರಿತು ಆಯುಕ್ತರೊಂದಿಗೆ ಅವರಿಗೆ ಹಂಚಿಕೊಂಡರು.

ಹೊಸ ವರ್ಷ ಸಂಭ್ರಮಾಚರಣೆ ಹಿನ್ನಲೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಸೇರುವ ರಸ್ತೆಗಳ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ.

ನಗರದ ಎಂ.ಜಿ.ರಸ್ತೆ, ಬ್ರಿಗೇಡ್‌ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಚರ್ಚ್ ಸ್ಟ್ರೀಟ್‌ನಲ್ಲಿ ಹೊಸವರ್ಷ ಆಚರಣೆ ಜೋರಾಗಿರೋದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ವಾಹನಗಳ ಸಂಚಾರ ಮಾರ್ಪಾಡು ಮಾಡಲಾಗಿದೆ. ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶ ನಿಷೇಧ ವಿಧಿಸಲಾಗಿದೆ.

ಮಾರ್ಗ ಬದಲಾವಣೆ ಕುರಿತ ಮಾಹಿತಿ ಇಂತಿದೆ...

  • ಎಂ.ಜಿ.ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ
  • ಬ್ರಿಗೇಡ್ ರಸ್ತೆಯಲ್ಲಿ, ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಅಪೇರಾ ಜಂಕ್ಷನ್‌ವರೆಗೆ
  • ಚರ್ಚ್ ಸ್ಟ್ರೀಟ್ರಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
  • ರೆಸ್ಟ್ ಹೌಸ್ ರಸ್ತೆಯಲ್ಲಿ ಮ್ಯೂಸಿಯಂ ರಸ್ತೆ ಜಂಕ್ಷನ್ ನಿಂದ ಬ್ರಿಗೇಡ್‌ ರಸ್ತೆ ಜಂಕ್ಷನ್ ವರೆಗೆ
  • ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ರಸ್ತೆ ಜಂಕ್ಷನ್ ನಿಂದ ಎಂ.ಜಿ ರಸ್ತೆ ಜಂಕ್ಷನ್‌ ವರೆಗೆ (ಶಂಕರ್ ನಾಗ್ ಚಿತ್ರಮಂದಿರ)
  • ರೆಸಿಡೆನ್ಸಿ ರಸ್ತೆಯ ಆಶಿರ್ವಾದಂ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ ಡಿಸೆಂಬರ್ 31 ರಂದು ರಾತ್ರಿ 8-00 ಗಂಟೆ ಬಳಿಕ ಸಂಚಾರ ವ್ಯವಸ್ಥೆ ಮಾರ್ಪಾಡು ಆಗಲಿದೆ.
  • ಎಂ.ಜಿ ರಸ್ತೆಯಲ್ಲಿ, ಕ್ಲೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಇನ್ನು ಮುಂದಕ್ಕೆ ಹೋಗುವಂತಹ ಚಾಲಕರು, ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡತಿರುವು ಪಡೆದು, ಸೆಂಟ್ರಲ್ ಸ್ಟ್ರೀಟ್-ಬಿ.ಆರ್.ವಿ ಜಂಕ್ಷನ್-ಬಲ ತಿರುವು ಕಬ್ಬನ್‌ರಸ್ತೆ ಮೂಲಕ ಸಂಚರಿಸಿ ವೆಬ್‌ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಿ ಮುಂದೆ ಸಾಗಬಹುದಾಗಿದೆ.
  • ಹಲಸೂರು ಕಡೆಯಿಂದ ಕಂಟೊನ್ವೆಂಟ್ ಕಡೆಗೆ ಹೋಗುವಂತಹ ವಾಹನಗಳು, ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದುಕೊಂಡು ಹಲಸೂರು ರಸ್ತೆ-ಡಿಕೆನ್ಸನದ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್‌ರಸ್ತೆ ಸೇರಿ ಮುಂದೆ ಸಾಗುವುದು.
  • ಹಲಸೂರು ಕಡೆಯಿಂದ ಮೆಜಸ್ಟಿಕ್ ಕಡೆಗೆ ಹೋಗುವಂತಯ ವಾಹನಗಳು ಮೆಯೋಹಾಲ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಗರುಡ ಮಾಲ್ ಜಂಕ್ಷನ್, ಡಿಸೋಜಾ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ರಿಚ್ಮಂಡ್ ರಸ್ತೆಯ ಮೂಲಕ ಸಾಗಬಹುದು.
  • ಪಂಚತಾರಾ ಹೋಟೆಲ್‌ಗಳು, ಕ್ಲಬ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳಲ್ಲಿಪಾರ್ಟಿಗಳು ಹಾಗೂ ಔತಣಕೂಟಗಳ ಆಯೋಜನೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಈ ನಡುವೆ ನಗರಾದ್ಯಂತ ಕಟ್ಟೆಚ್ಚರ ವಹಿಸಿರುವ ಪೊಲೀಸ್‌ ಇಲಾಖೆ ತಡರಾತ್ರಿ 1 ಗಂಟೆಗೆ ಸಂಭ್ರಮಾಚರಣೆಗೆ ಡೆಡ್‌ಲೈನ್‌ ನಿಗದಿ ಮಾಡಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೇಲ್ಸೇತುವೆ ಹೊರತುಪಡಿಸಿ ಉಳಿದೆಲ್ಲಾಮೇಲ್ಸೇತುವೆಗಳಲ್ಲಿಡಿ.31ರಂದು ರಾತ್ರಿ 11 ಗಂಟೆಯಿಂದ ಮರುದಿನ ಬೆಳಗ್ಗೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಡ್ರಗ್ಸ್‌ ತಡೆಗೆ ಹದ್ದಿನ ಕಣ್ಣು
ಪಾರ್ಟಿಗಳಲ್ಲಿ ಡ್ರಗ್ಸ್‌ ಪೂರೈಕೆ ಶಂಕೆ ಹಿನ್ನೆಲೆಯಲ್ಲಿಪ್ರತ್ಯೇಕ ಪೊಲೀಸ್‌ ತಂಡಗಳು ಹದ್ದಿನ ಕಣ್ಣಿಟ್ಟಿವೆ. ಜತೆಗೆ, ಅಕ್ರಮವಾಗಿ ಮದ್ಯ ಸರಬರಾಜು ಆಗುವ ಸಾಧ್ಯತೆಯಲ್ಲಿಅಬಕಾರಿ ಇಲಾಖೆ ಜತೆ ಜಂಟಿ ತಂಡಗಳನ್ನು ರಚಿಸಿ ತೀವ್ರ ನಿಗಾ ವಹಿಸಲಾಗಿದೆ. ಅಷ್ಟೇ, ಪ್ರತಿ ಠಾಣಾ ವ್ಯಾಪ್ತಿಯಲ್ಲಿತಾತ್ಕಾಲಿಕ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಮಹಿಳೆಯರ ಸುರಕ್ಷತೆ ಸಲುವಾಗಿ ಈಗಾಗಲೇ ನಗರದಲ್ಲಿರುವ 69 ಮಹಿಳಾ ಹೊರಠಾಣೆಗಳ ಜತೆ ಬ್ರಿಗೇಡ್‌ ರಸ್ತೆಯಲ್ಲಿ 16ಕ್ಕೂ ಅಧಿಕ 'ಸೇಫ್ಟಿ ಐಲ್ಯಾಂಡ್‌' ನಿರ್ಮಿಸಲಾಗಿದೆ.

SCROLL FOR NEXT