ಸಂಸದ ಪ್ರತಾಪ್ ಸಿಂಹ 
ರಾಜ್ಯ

ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ: ಸಂಸದ ಪ್ರತಾಪ್ ಸಿಂಹ

ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 

ಮೈಸೂರು: ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 

ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ನ್ಯಾಯಾಧೀಶರಿಗೆ ಧನ್ಯವಾದಗಳು. ಹಾಗು ಕರೆ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ ಮತ್ತು ಮಾಧ್ಯಮ ಮಿತ್ರರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ನಿನ್ನೆ ಬಂಧಿಸಲಾಗಿತ್ತು. ಪ್ರಕರಣ ಸಬಂಧ ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಬೇಲೂರು ತಹಶೀಲ್ದಾರ್ ಮಮತಾ ನೀಡಿದ್ದ ದೂರು ಆಧರಿಸಿ FIR ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪ ಹಿನ್ನೆಲೆ ವಿಕ್ರಂ ಸಿಂಹರನ್ನು ಬಂಧಿಸಲಾಗಿತ್ತು. ವಿಕ್ರಂ ಸಿಂಹರನ್ನು ಇಂದು ಜಡ್ಜ್​​ ಮುಂದೆ ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT