ರಾಜ್ಯ

ವಿವಿಧ ಬೇಡಿಕೆಗಳಿಗೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ: ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ

Manjula VN

ಬೆಂಗಳೂರು: ಗ್ರಾಚ್ಯೂಟಿ ಸೇರಿ ವಿವಿಧ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕಾಗಿ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಗ್ರಾಚ್ಯುಟಿ ನೀಡಬೇಕು. ಶಾಲಾ ಪೂರ್ವ ಶಿಕ್ಷಣಕ್ಕೆ ಸಮಯ ನಿಗದಿ, ಪದೋನ್ನತಿ ಕುರಿತು ಆದೇಶ ವಾಪಸ್ ಸೇರಿ ಬಹುತೇಕ ಬೇಡಿಕೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ. ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜ.23ರಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ಅಂಗನವಾಡಿ  ನೌಕರರ ಸಂಘ ಘೋಷಿಸಿದೆ.

ರಾಜ್ಯ ಸರ್ಕಾರದ ಪರವಾಗಿ ಸಚಿವ ಹಾಲಪ್ಪ ಅವರು, ಧರಣಿ ನಿರತ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಂಧಾನ ಸಭೆ ನಡೆಸಿದ್ದು, ಈ ಸಭೆ ಇದೀಗ ಯಶಸ್ವಿಯಾಗಿದೆ.

ಅಂಗನವಾಡಿ ಕಾರ್ಯಕರ್ತರ ಬಹುತೇಕ ಬೇಡಿಕೆ ಈಡೇರಿಸುವುದಕ್ಕೆ ಒಪ್ಪಿಗೆ ಕೊಟ್ಟಿದ್ದೇವೆ. 10 ರಿಂದ 1 ಗಂಟೆವರೆಗೆ ಕಾರ್ಯಕರ್ತರನ್ನು ಇತರೆ ಯಾವುದೇ ಕೆಲಸಕ್ಕೆ ನಿಯೋಜನೆ ಮಾಡೋ ಹಾಗಿಲ್ಲ ಎನ್ನುವ ಬೇಡಿಕೆಗೂ ನಾವು ಒಪ್ಪಿದ್ದೇವೆ. ಸಿಎಂ ಕೂಡ ಗ್ರಾಚ್ಯುವಿಟಿ ನೀಡಲು ಒಪ್ಪಿಗೆ ಕೊಟ್ಟಿದ್ದು, ಎಲ್ಲವನ್ನೂ ಹಂತ ಹಂತವಾಗಿ ಜಾರಿ ಮಾಡುತ್ತೇವೆ. ಪ್ರತಿಭಟನೆ ಕೈ ಬಿಡುವುದಾಗಿ ಕಾರ್ಯಕರ್ತರು ಕೂಡ ಒಪ್ಪಿದ್ದು ಇಂದು ರಾತ್ರಿ ಮತ್ತೆ ಗ್ರಾಚ್ಯುವಿಟಿ ವಿಚಾರವಾಗಿ ಸಭೆ ನಡೆಸಿ ನಿರ್ಧಾರವನ್ನು ಕಾರ್ಯರೂಪಕ್ಕೆ ತರುತ್ತೇವೆ. ಪಿಯುಸಿ ಅರ್ಹತೆ ಇಲ್ಲದೇ ಇರುವ ಕಾರ್ಯಕರ್ತೆಯರಿಗೂ ಒಂದು ಬಾರಿ ಬಡ್ತಿ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ’ ಎಂದು ಹಾಲಪ್ಪ ಅವರು ಹೇಳಿದ್ದಾರೆ.

SCROLL FOR NEXT