ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು: ಸಚಿವ ಹಾಲಪ್ಪ ಆಚಾರ್

Manjula VN

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು ಭರವಸೆ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮುಷ್ಕರ ನಿರತ ಅಂಗನವಾಡಿ ನೌಕರರ ಸಂಘದ ಮುಖಂಡರೊಂದಿಗೆ ಆಚಾರ್ ಹಾಗೂ ಅಧಿಕಾರಿಗಳು ಸಭೆ ನಡೆಸಿದರು. ಈ ವೇಳೆ  ಬೇಡಿಕೆಗಳನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು 10 ದಿನಗಳ ಕಾಲ ನಡೆಸಿದ ಪ್ರತಿಭಟನೆ ಬಳಿಕ ಸಭೆ ನಡೆಸಲಾಯಿತು.

ಸಭೆಯ ನಂತರ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಲಾಗುವುದು. ‘ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳುವ ಜತೆಗೆ ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

SCROLL FOR NEXT