ನಾಡ ಕಚೇರಿ ಉದ್ಘಾಟಿಸಿದ ಸಚಿವ ಆರ್.ಅಶೋಕ 
ರಾಜ್ಯ

ರಾಜ್ಯದ ಎಲ್ಲಾ ಗ್ರಾಮ ಲೆಕ್ಕಿಗರಿಗೆ ಸರ್ಕಾರದಿಂದ ಟ್ಯಾಬ್ ವಿತರಣೆ: ಸಚಿವ ಆರ್.ಅಶೋಕ

ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಆರ್.ಅಶೋಕ, ವಸ್ತಾರೆ ಮತ್ತು ಅಂಬಳಿ ಹೋಬಳಿಯಲ್ಲಿ ಅಟಲ್ ಜನಸ್ನೇಹಿ ಕೇಂದ್ರದ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ಹಕ್ಕುಪತ್ರ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಆರ್.ಅಶೋಕ, ವಸ್ತಾರೆ ಮತ್ತು ಅಂಬಳಿ ಹೋಬಳಿಯಲ್ಲಿ ಅಟಲ್ ಜನಸ್ನೇಹಿ ಕೇಂದ್ರದ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ಹಕ್ಕುಪತ್ರ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ನಂತರ ಮಾತನಾಡಿದ ಸಚಿವರು, ರಾಜ್ಯದ ಎಲ್ಲಾ ಗ್ರಾಮ ಲೆಕ್ಕಿಗರಿಗೆ ರಾಜ್ಯ ಸರ್ಕಾರದಿಂದ ಟ್ಯಾಬ್ ಗಳನ್ನು ವಿತರಿಸಲಾಗುವುದು ಎಂದರು. ಗ್ರಾಮ ಲೆಕ್ಕಿಗರ ಕೆಲಸಗಳಲ್ಲಿ ಸರಳೀಕರಣ  ಮತ್ತು ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯ ಕಚೇರಿಗಳನ್ನು ಕಂಪ್ಯೂಟರೀಕರಣ ಮಾಡಲಾಗುವುದು, ಕಾಗದ ಬಳಕೆ ಕಡಿಮೆ ಮಾಡಿ ತಂತ್ರಜ್ಞಾನದ ಮೂಲಕ ಸಾರ್ವಜನಿಕ ಸೇವೆ ನೀಡಲು ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಡ್ರೋನ್ ಮೂಲಕ ಭೂಮಿ ಸರ್ವೇ ಮಾಡಲು ಸರ್ಕಾರ ಕ್ರಮ ಕೈಗೊಂಡಿರುವುದಾಗಿ ಸಚಿವರು ಇದೇ ವೇಳೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT