ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರು ಪಾಲು

ಇಬ್ಬರು ಮಕ್ಕಳೊಂದಿಗೆ ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ಪನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ಪನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಖಾನಾಪುರ ನಿವಾಸಿ ಸುನೀಲ್ ತಳವಾರ (33) ಎಂದು ಗುರ್ತಿಸಲಾಗಿದೆ. ಶನಿವಾರ ಬೆಳಿಗ್ಗೆ ಮುಳುಗು ತಜ್ಞರು ಸುನೀಲ್ ಅವರ ಮೃತದೇಹವನ್ನು ನದಿಯಿಂದ ಹೊರಗೆ ತೆಗೆದಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ಈಜಲು ಸುನೀಲ್ ತಳವಾರ ಅವರು ನದಿಗೆ ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಆಳವಿದ್ದ ಪ್ರದೇಶದಲ್ಲಿ ಜಾರಿ ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕೆಲವರು ಸ್ಥಳಕ್ಕೆ ಬಂದು ಹಗ್ಗ ಬಾಗೂ ಪ್ಲಾಸ್ಟಿಕ್ ಪೈಪ್ ನೀಡಿ ಆತನನ್ನು ರಕ್ಷಣೆ ಮಾಡಲು ಯತ್ನಿಸಿದರಾದರೂ ಅದು ಯಶಸ್ವಿಯಾಗಿಲ್ಲ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಮುಳುಗು ತಜ್ಞರೊಂದಿಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಸುನೀಲ್'ರನ್ನು ಹುಡುಕುವ ಪ್ರಯತ್ನ ಮಾಡಿದ್ದಾರೆ. ಆದರೆ, ಮೃತದೇಹ ಪತ್ತೆಯಾಗಿರಲಿಲ್ಲ. ಶನಿವಾರ ಬೆಳಿಗ್ಗೆ ಮೃತದೇಹ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ