ಸಿಎಂ ಬೊಮ್ಮಾಯಿ 
ರಾಜ್ಯ

ಕುರುಬರ ಮೀಸಲಾತಿ ಪರ ಸರ್ಕಾರವಿದೆ: ಸಿಎಂ ಬೊಮ್ಮಾಯಿ

ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಕುಲಶಾಸ್ತ್ರೀಯ ವರದಿ ಬಂದ ಕೂಡಲೇ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ, ಬಹುದಿನಗಳ ಹೋರಾಟಕ್ಕೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಹೊಸಪೇಟೆ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಕುಲಶಾಸ್ತ್ರೀಯ ವರದಿ ಬಂದ ಕೂಡಲೇ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ, ಬಹುದಿನಗಳ ಹೋರಾಟಕ್ಕೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ವಸತಿ ಶಾಲೆ ಕಟ್ಟಡವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಕುಲಶಾಸ್ತ್ರೀಯ ಅಧ್ಯಯನವು ಅಂತಿಮ ಘಟ್ಟ ತಲುಪಿದ್ದು, ಶೀಘ್ರದಲ್ಲಿಯೇ ವರದಿ ಬರುವ ನಿರೀಕ್ಷೆಗಳಿವೆ. ಎಲ್ಲಾ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಿಸಲು ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿದರು.

ಮೀಸಲಾತಿ ವಿಚಾರ ಕುರಿತು ಈ ಹಿಂದೆಯೇ ನಾವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆವು. ಆದರೆ, ಕೆಲ ಅಪೂರ್ಣ ಮಾಹಿತಿಯಿಂದಾಗಿ ಒಪ್ಪಿಗೆ ಸಿಕ್ಕಿರಲಿಲ್ಲ. ಈ ಬಾರಿ ವಿಸ್ತೃತ ವರದಿ ಕಳುಹಿಸಿ ಕುರುಬ ಸಮುದಾಯಕ್ಕೆ ಒಳ್ಳೆಯ ಸುದ್ದಿ ನೀಡುವ ಭರವಸೆ ನಮಗಿದೆ ಎಂದು ತಿಳಿಸಿದರು.

''ನಮ್ಮ ಸರಕಾರ ಕುರುಬ ಸಮುದಾಯದ ಕಲ್ಯಾಣಕ್ಕಾಗಿ 350 ಕೋಟಿ ರೂ. ಮೀಸಲಿಟ್ಟಿದ್ದು, ಸಮುದಾಯಕ್ಕೆ ಇತರೆ ಯೋಜನೆಗಳನ್ನೂ ನೀಡಿದ್ದೇವೆ. ನಾವು ಯಾವಾಗಲೂ ಶಿಕ್ಷಣವನ್ನು ಬೆಂಬಲಿಸುತ್ತೇವೆ. ಜೀವನಶೈಲಿಯಲ್ಲಿ ಬದಲಾವಣೆಗಳು ಮತ್ತು ಸುಧಾರಣೆಗಳನ್ನು ಪಡೆಯಲು ಇದು ಏಕೈಕ ಮಾರ್ಗವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT