ಪ್ರಧಾನಿ ಮೋದಿ 
ರಾಜ್ಯ

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ, 1,500 ವಿದ್ಯಾರ್ಥಿಗಳ ರವಾನಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್‌ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್‌ ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್‌ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್‌ ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ರ್ಯಾಲಿ ಹಿನ್ನೆಲೆಯಲ್ಲಿ 1000-1,500 ವಿದ್ಯಾರ್ಥಿಗಳ ರವಾನಿಸುವಂತೆ ನಗರದ 6 ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ನಾಳೆ ಬೆಂಗಳೂರಿಗೆ ಆಗಮಿಸಿರುವ ಮೋದಿಯವರು ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ. ಈ ರ್ಯಾಲಿಯು ಹಸಿರು ಇಂಧನ ಮೂಲಗಳ ಮೇಲೆ ಚಲಿಸುವ ವಾಹನಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ ಮತ್ತು ಹಸಿರು ಇಂಧನಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡುತ್ತದೆ.

ರ್ಯಾಲಿಯು 42 ಕಿ.ಮೀ ರಸ್ತೆಯವರೆಗೂ ನಡೆಯಲಿದ್ದು, ರ್ಯಾಲಿಗೆ 1,000-1,5000 ವಿದ್ಯಾರ್ಥಿಗಳನ್ನು ಕಳುಹಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

ರ್ಯಾಲಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಿಂದ ಆರಂಭಗೊಂಡು ನೀಲಕಂಠ ಪಾರ್ಕಿಂಗ್ ಮೈದಾನ/ಮಾದಾವರ ಮೈದಾನದಲ್ಲಿ ಕೊನೆಗೊಳ್ಳಲಿದೆ.

ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಲು ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ ಮತ್ತು ಯುವಿಸಿಇಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT