ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಪಾಂಗಾಳದಲ್ಲಿ 42 ವರ್ಷದ ವ್ಯಕ್ತಿಗೆ ಅಪರಿಚಿತರಿಂದ ಚಾಕು ಇರಿತ, ಸಾವು

ಕಾಪು ಪಾಂಗಾಳದಲ್ಲಿ ಭಾನುವಾರ ಸಂಜೆ 42 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಸಮೀಪದ ಮುಂಡೇಡಿ ನಿವಾಸಿ ಶರತ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಉಡುಪಿ: ಇಲ್ಲಿನ ಕಾಪು ಪಾಂಗಾಳದಲ್ಲಿ ಭಾನುವಾರ ಸಂಜೆ 42 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಸಮೀಪದ ಮುಂಡೇಡಿ ನಿವಾಸಿ ಶರತ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಶರತ್ ಶೆಟ್ಟಿಗೆ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದು,  ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಅವರು ಜಮೀನು ವ್ಯವಹಾರವನ್ನು ಹೊಂದಿದ್ದರು ಎನ್ನಲಾಗಿದೆ.  ಆದರೆ ಕೊಲೆಯ ಹಿಂದಿನ ಉದ್ದೇಶವು ಪೊಲೀಸರಿಂದ ಇನ್ನೂ ತಿಳಿದುಬಂದಿಲ್ಲ.

ಮೃತರ ದೇಹದ ಎದೆಯ ಭಾಗದಲ್ಲಿ ಗಾಯ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ. ಮೃತರು ಅವಿವಾಹಿತರಾಗಿದ್ದರು. ಕಾಪು ಪೊಲೀಸರು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ಪ್ರಯತ್ನಿಸುತ್ತಿದೆ. ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?