ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು; ಐವರ ವಿರುದ್ಧ ಪ್ರಕರಣ

ಕನಕಪುರ ರಸ್ತೆಯಲ್ಲಿರುವ ವಸತಿ ಅಪಾರ್ಟ್‌ಮೆಂಟ್‌ನ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ (ಎಸ್‌ಟಿಪಿ) ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ  ಶನಿವಾರ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು: ಕನಕಪುರ ರಸ್ತೆಯಲ್ಲಿರುವ ವಸತಿ ಅಪಾರ್ಟ್‌ಮೆಂಟ್‌ನ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ (ಎಸ್‌ಟಿಪಿ) ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ  ಶನಿವಾರ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದಾಗ ಇಬ್ಬರು ಎಸ್‌ಟಿಪಿ ಕೆಲಸದಲ್ಲಿ ನಿರತರಾಗಿದ್ದರು.

ಮೃತರನ್ನು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದ ರವಿಕುಮಾರ್ ಮತ್ತು ಒಡಿಶಾ ಮೂಲದ ದಿಲೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಬ್ಬರು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ. ಕೋಣನಕುಂಟೆ ಬಳಿ ಇರುವ  ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ.

ಕುಮಾರ್ ಅವರ 29 ವರ್ಷದ ಪತ್ನಿ ಶಶಿಕಲಾ ಅವರಿಗೆ ರಾತ್ರಿ 9 ಗಂಟೆ ಸುಮಾರಿಗೆ ಪತಿ ಸಾವಿನ ಬಗ್ಗೆ ತಿಳಿದು ಬಂದಿದೆ . ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ಮೃತರೊಬ್ಬರ ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಐದು ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ಎ ಅಡಿಯಲ್ಲಿ ನಿರ್ಲಕ್ಷ್ಯದಿಂದ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ. ಇವರಿಬ್ಬರು ನಗರ ಮೂಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು, ಅದು ನಿರ್ಮಾಣ ಮತ್ತು ಸಂಸ್ಕರಣಾ ಘಟಕಗಳಲ್ಲಿದೆ.

ಸಂತ್ರಸ್ತರಿಬ್ಬರು ಕೆಲಸ ಮಾಡಿದ ಸಂಸ್ಥೆಯ ಮಾಲೀಕ ಮುಕ್ತಿಯಾರ್ ಅಹಮದ್, ಪ್ರಭು, ಅಪಾರ್ಟ್‌ಮೆಂಟ್ ಸಮುಚ್ಚಯದ ಆಡಳಿತಾಧಿಕಾರಿ ರಮೇಶ್ ಹಾಗೂ ಅಪಾರ್ಟ್‌ಮೆಂಟ್ ಮಾಲೀಕನ ವಿರುದ್ಧ ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT