ರಾಜ್ಯ

ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರ ಸಾವು: ಸರ್ಕಾರದ ವಿರುದ್ಧ ನಾಗರೀಕರ ಪ್ರತಿಭಟನೆ

Manjula VN

ಬೆಂಗಳೂರು: ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮಲ ಹೊರುವ ಪದ್ಧತಿಯನ್ನು ತೊಡೆದು ಹಾಕುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ನಾಗರೀಕ ಹೋರಾಟಗಾರರು ಮಂಗಳವಾರ ಪ್ರತಿಭಟನೆ ನಡೆಸಿದರು.

ತುಮಕೂರಿನ ಕೊರಟಗೆರೆ ತಾಲ್ಲೂಕಿನ ಗೊಲ್ಲರಹಟ್ಟಿ ನಿವಾಸಿ ರವಿಕುಮಾರ್ (29) ಮತ್ತು ಒಡಿಶಾದ ದಿಲೀಪ್ ಕುಮಾರ್ ಜನಾ (25) ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಮೃತಪಟ್ಟಿದ್ದರು.

ಬಯೋ ಸೆಂಟರ್ ಇಂಡಿಯಾದ ಕಂಪನಿಯ ನೌಕರರಾಗಿದ್ದ ಈ ಇಬ್ಬರನ್ನು ಕಂಪನಿ ಪ್ರೆಸ್ಟೀಜ್ ಪಾಳ್ಕನ್ ಸಿಟಿ ಅಪಾರ್ಟ್'ಮೆಂಟ್'ನ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಕೆಲಸಕ್ಕೆ ನಿಯೋಜಿಸಿತ್ತು. ಶನಿವಾರ ಮಧ್ಯಾಹ್ನ 2 ಗಂಟೆಗೆ ಇಬ್ಬರು ಕಾರ್ಮಿಕರು ಎಸ್'ಟಿಪಿ ಬಳಿ ಬಂದು ಕೆಲಸ ಮಾಡುತ್ತಿದ್ದರು. ಈ ವೇಳೆ ಉಸಿರುಗಟ್ಟಿ ಅಥವಾ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಖಂಡಿಸಿ ನಾಗರೀಕ ಹೋರಾಟಗಾರರು ಮೃತರಿಗೆ ನ್ಯಾಯ ಒದಗಿಸುವಂತೆ ಮಂಗಳವಾರ ಪ್ರತಿಭಟನೆ ನಡೆಸಿದರು.

ರವಿ ಮತ್ತು ದಿಲೀಪ್ ಕುಟುಂಬಗಳಿಗೆ ಪರಿಹಾರ ನೀಡುವಂತೆ ಅಪಾರ್ಟ್‌ಮೆಂಟ್‌ ಎದುರು ಹಲವಾರು ನಾಗರಿಕರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೆ, ಮಲ ಹೊರುವ ಪದ್ಧತಿಯನ್ನು ಇನ್ನೂ ಮುಂದುವರೆಸಿರುವವರನ್ನು ಘಟನೆಯ ಹೊಣೆಗಾರರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು.

SCROLL FOR NEXT