ಮಂಗಳೂರು: ಲಾಡ್ಜ್ನಲ್ಲಿ ಕೇರಳ ಮೂಲದ ದಂಪತಿಯ ಮೃತದೇಹ ಪತ್ತೆ
ಖಾಸಗಿ ಲಾಡ್ಜ್ ವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರು: ಖಾಸಗಿ ಲಾಡ್ಜ್ ವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಫೆಬ್ರವರಿ 6ರಂದು ಫಳ್ನೀರ್ ನ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು ಮೃತರು ಕೇರಳ ಮೂಲದವರಾಗಿದ್ದು ಬಟ್ಟೆ ವ್ಯಾಪಾರಿ ಎಂಬ ಮಾಹಿತಿ ಇದೆ. ಆತ್ಮಹತ್ಯೆಗೆ ಕಾರಣ ಏನೆಂದು ಗೊತ್ತಾಗಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.