ರಾಜ್ಯ

ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣ: ಮಂಗಳೂರು ಆಸ್ಪತ್ರೆ, ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲು

Manjula VN

ಮಂಗಳೂರು: ಕಳಪೆ ಆಹಾರ ಸೇವಿಸಿ 231 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಟಿ ಆಸ್ಪತ್ರೆ ಮತ್ತು ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರಿನ ಶಕ್ತಿನಗರದ ಹಾಸ್ಟೆಲ್‌ನಲ್ಲಿ ರಾತ್ರಿ ಆಹಾರ ಸೇವನೆ ಮಾಡಿದ ಬಳಿಕ 782 ವಿದ್ಯಾರ್ಥಿಗಳ ಪೈಕಿ 231 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಕೂಡಲೇ ಎಲ್ಲಾ ವಿದ್ಯಾರ್ಥಿಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಸಂಬಂಧ ಕಲುಷಿತ ಆಹಾರ ನೀಡಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ಡಿಎಸ್‌ಒ ಡಾ.ಜಗದೀಶ ಕೆ ಪೊಲೀಸರಿಗೆ ದೂರು ನೀಡಿದ್ದಾರೆ.

"ಹಾಸ್ಟೆಲ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮಾಹಿತಿಯನ್ನು ಮರೆಮಾಚಿದ್ದಾರೆ ಮತ್ತು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲು ವಿಫಲರಾಗಿದ್ದಾರೆ" ಎಂದು ಡಾ ಜಗದೀಶ ಆರೋಪಿಸಿದ್ದಾರೆ.

.ಏತನ್ಮಧ್ಯೆ, ಆರೋಗ್ಯ ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ ರೆಫ್ರಿಜರೇಟರ್‌ನಲ್ಲಿ ಇರಿಸಲಾದ ಆಹಾರ, ನೀರು ಮತ್ತು ಇತರ ವಸ್ತುಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆಂದು ತಿಳಿದುಬಂದಿದೆ.

SCROLL FOR NEXT