ಕರ್ನಾಟಕ ಹೈಕೋರ್ಟ್ 
ರಾಜ್ಯ

ನ್ಯಾಯಾಲಯದಲ್ಲಿ ದುರಹಂಕಾರದ ವರ್ತನೆ: ವಕೀಲರನ್ನು ಜೈಲಿಗೆ ಕಳುಹಿಸಿದ ಕರ್ನಾಟಕ ಹೈಕೋರ್ಟ್!

ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಬೆಂಗಳೂರು: ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಫೆಬ್ರವರಿ 2, 2023 ರಂದು ನ್ಯಾಯವಾದಿ ಕೆಎಸ್ ಅನಿಲ್ ವಿರುದ್ಧ ಹೈಕೋರ್ಟ್ 2019 ರಲ್ಲಿ ಆರಂಭಿಸಿದ ಕ್ರಿಮಿನಲ್ ನಿಂದನೆ ಪ್ರಕ್ರಿಯೆಯಲ್ಲಿ ಈ ಆದೇಶ ನೀಡಿದೆ.

ಮೌಖಿಕವಾಗಿ ಅಥವಾ ಲಿಖಿತ ಅರ್ಜಿ ಸಲ್ಲಿಸಲು ಸ್ವಲ್ಪ ಸಮಯ ಅಗತ್ಯವಿದೆಯೇ ಎಂದು ನಾವು ಆರೋಪಿಯನ್ನು ಕೇಳಿದ್ದೆವು. ಆದರೆ, ಅವರು ನ್ಯಾಯಾಲಯದ ಪ್ರಶ್ನೆಯನ್ನು ತಪ್ಪಿಸಿ ದುರಹಂಕಾರದಿಂದ ವರ್ತಿಸಲು ಪ್ರಾರಂಭಿಸಿದರು, ನಾವು ತಾಳ್ಮೆಯಿಂದ ಕೇಳಲು ಪ್ರಯತ್ನಿಸಿದರೂ, ಆರೋಪಿಗಳು ನ್ಯಾಯಾಲಯದಲ್ಲಿ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಎಂದು ನ್ಯಾಯಾಲಯ ಹೇಳಿದೆ.

ಈ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಆರೋಪಗಳನ್ನು ಮಾಡುವುದು ಆರೋಪಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಯಾವುದೇ ಗೌರವವಿಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಪ್ರಾಕ್ಟೀಸ್ ವಕೀಲರಾಗಿ, ಆರೋಪಿಯು ಹಿಂದಿನ ಸಂದರ್ಭಗಳಲ್ಲಿಯೂ ಸಹ, ನ್ಯಾಯಾಂಗ ವ್ಯವಸ್ಥೆ ಹಾಗೂ ನಿರ್ದಿಷ್ಟವಾಗಿ ನ್ಯಾಯಾಂಗ ಅಧಿಕಾರಿಗಳ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದರ ಜೊತೆಗೆ ಸಂಸ್ಥೆಯನ್ನು ಅವಮಾನಿಸಲು ಪ್ರಯತ್ನಿಸಿದ್ದಾರೆ. ನ್ಯಾಯಾಂಗ ವ್ಯವಸ್ಥೆಯ ಇಮೇಜ್ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ ಎಂದು ವಿಭಾಗೀಯ ಪೀಠ ತಿಳಿಸಿದೆ.

ನ್ಯಾಯಾಂಗ ನಿಂದನೆ ಎಸಗಿರುವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಆದೇಶವನ್ನು ಹೊರಡಿಸುವುದನ್ನು ಬಿಟ್ಟು ಈ ನ್ಯಾಯಾಲಯಕ್ಕೆ ಬೇರೆ ದಾರಿಯೇ ಇಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಮುಂದಿನ ವಿಚಾರಣೆಯ ದಿನಾಂಕ ಫೆಬ್ರವರಿ 10, 2023 ರಂದು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ನ್ಯಾಯಾಲಯ ಹೇಳಿದೆ.

2019 ರಲ್ಲಿ ಅನಿಲ್ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಆರಂಭಿಸಲಾಗಿತ್ತು, ಹೈಕೋರ್ಟ್‌ನ ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಮಾಡಿದ ಆರೋಪಗಳು ನ್ಯಾಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಹೇಳಿತ್ತು.  ನ್ಯಾಯಾಧೀಶರ ವಿರುದ್ಧ  ಮಾಡಿರುವ ಎಲ್ಲಾ ಆರೋಪಗಳನ್ನು ಬೇಷರತ್ತಾಗಿ ಹಿಂಪಡೆಯಲು ಹಾಗೂ ಬೇಷರತ್ ಕ್ಷಮೆಯಾಚಿಸಲು ಆರೋಪಿಗೆ ಕಾಲಾವಕಾಶ ನೀಡಲಾಗಿದ್ದರೂ, ಅವರು ಕ್ಷಮೆ ಕೇಳಿರಲಿಲ್ಲ, ಹೀಗಾಗಿ ಜೈಲಿಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT