ರಾಜ್ಯ

ಐತಿಹಾಸಿಕ ಲಕ್ಕುಂಡಿ ಉತ್ಸವ-2023ಕ್ಕೆ ಸಿಎಂ ಬೊಮ್ಮಾಯಿ ಚಾಲನೆ

Nagaraja AB

ಗದಗ:  ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಕಾಲ ನಡೆಯುವ  ಆಯೋಜಿಸಿರುವ ಐತಿಹಾಸಿಕ 'ಲಕ್ಕುಂಡಿ ಉತ್ಸವ-2023'ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಂಜೆ ಚಾಲನೆ ನೀಡಿದರು.

ಸಚಿವರಾದ ಸಿಸಿ ಪಾಟೀಲ್, ಮುರುಗೇಶ್ ನಿರಾಣಿ, ಶ್ರೀರಾಮುಲು, ಆನಂದ್ ಸಿಂಗ್, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಜಿ  ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನಾ  ಲಕ್ಕುಂಡಿ ಗ್ರಾಮದ ಸರಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಚಾಲನೆ ನೀಡಿದರು. ಡೊಳ್ಳು ಕುಣಿತ, ನಂದಿಕೋಲು, ಕರಡಿ ಮಜಲು, ಜಾಂಜ್ ಮೇಳ, ಕೀಲುಕುದುರೆ ಕಲಾವಿದರು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದರು.

205ಕ್ಕೂ ಹೆಚ್ಚು ಮಹಿಳೆಯರು ಕುಂಭ ಹೊತ್ತು ಸಾಗಿದರು. ವಿದ್ಯಾರ್ಥಿಗಳು ಕಿತ್ತೂರು ಚೆನ್ನಮ್ಮ, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ, ಕನ್ನಡಾಂಬೆ ಸೇರಿದ ವಿವಿಧ ಮಹನೀಯರ ವೇಷಭೂಷಣ ತೊಟ್ಟು ಆಕರ್ಷಿಸಿದರು. ಉತ್ಸವದ ಅಂಗವಾಗಿ ಲಕ್ಕುಂಡಿಯ ಬಿ.ಹೆಚ್. ಪಾಟೀಲ ಪ್ರೌಢಶಾಲೆ ಆವರಣದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

SCROLL FOR NEXT