ರಾಜ್ಯ

ಜನವರಿ ಮಾಹೆಯಲ್ಲಿ 6085 ಕೋಟಿ ರೂ. ಜಿ.ಎಸ್.ಟಿ ಸಂಗ್ರಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Srinivas Rao BV

ಬೆಂಗಳೂರು: ಜನವರಿ ಮಾಹೆಯಲ್ಲಿ  ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್ ಟಿ ತೆರಿಗೆ ಸಂಗ್ರಹ ಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ.

ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ  ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಟ್ವೀಟ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಹಾಗೂ ಮೈಸೂರು - ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. 

"ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ' ಎಂದಿರುವ ಸಿಎಂ ಅವರ ಟ್ವೀಟ್ ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, 'ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ" ಎಂದಿದ್ದಾರೆ.

SCROLL FOR NEXT