ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರೈಲಿಗೆ ತಲೆಕೊಟ್ಟು ಆದಾಯ ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಆದಾಯ ತೆರಿಗೆ ಇಲಾಖೆಯ ಇನ್ಸ್ ಪೆಕ್ಟರ್ ಓರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಇನ್ಸ್ ಪೆಕ್ಟರ್ ಓರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ದೇವೇಂದ್ರ ದುಬೆ ಆತ್ಮಹತ್ಯೆ ಮಾಡಿಕೊಂಡವರು. ಕಳೆದ 10 ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉತ್ತರಪ್ರದೇಶ ಮೂಲದ ದೇವೆಂದ್ರ ದುಬೆ ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾವಿಗೂ ಮುನ್ನ ದೇವೇಂದ್ರ ದುಬೆ ಉತ್ತರಪ್ರದೇಶದಲ್ಲಿರುವ ತನ್ನ ತಂದೆ-ತಾಯಿ ಜೊತೆ ಫೋನ್ ನಲ್ಲಿ ಮಾತನಾಡಿದ್ದಾರೆ. ಪತ್ನಿ ಆರತಿ ಮಾಳವಿ ಅವರಿಗೆ ಕರೆ ಮಾಡಿ ಸಂಜೆ ಮನೆಗೆ ಬರುವುದಾಗಿಯೂ ಹೇಳಿದ್ದಾರೆ.

ಆದರೆ ಸಂಜೆಯಾದರೂ ಮನೆಗೆ ಬಂದಿಲ್ಲ, ಪತ್ನಿ ಮೊಬೈಲ್ ಗೆ ಇನ್ಶುರೆನ್ಸ್ ಪಾಲಿಸಿ ಹಾಗೂ ಡೆತ್ ನೋಟ್ ವಾಟ್ಸಪ್ ಮೂಲಕ ಸೆಂಡ್ ಮಾಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ವಾಟ್ಸಪ್ ಮಾಡಿ ಸಾವಿಗೆ ಶರಣಾಗಿದ್ದಾರೆ.

ಪತಿ ನಾಪತ್ತೆ ಬಗ್ಗೆ ಆರತಿ ಮಾಳವಿಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೇವೇಂದ್ರ ದುಬೆ ಅವರ ಮೃತದೇಹ ಶೇಷಾದ್ರಿಪುರಂ ಬಿಡಿಎ ಬಳಿಯ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!