ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಂದಿನ ಜಂಬೂ ಪ್ಯಾಕೆಟ್ ಹಾಲಿನ ದರ 3 ರೂ ಹೆಚ್ಚಳ

ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ನಂದಿನಿ ಜಂಬೂ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಇತ್ತೀಚೆಗೆ ಹೆಚ್ಚಳ ಮಾಡಿತ್ತು. ಇದೀಗ ನಂದಿನ ಜಂಬೂ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ.

ನಂದಿನಿ ಹಾಲಿನ ಪ್ಯಾಕೆಟ್ ಸಾಂದರ್ಭಿಕ ಚಿತ್ರ
Sumana Upadhyaya
Updated On : 11 Feb 2023, 9:31 am

ಬೆಂಗಳೂರು: ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ನಂದಿನಿ ಜಂಬೂ ಹಾಲಿನ ದರ ಹೆಚ್ಚಳ ಮಾಡಲಾಗಿದೆ.  ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಇತ್ತೀಚೆಗೆ ಹೆಚ್ಚಳ ಮಾಡಿತ್ತು. ಇದೀಗ ನಂದಿನ ಜಂಬೂ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ. 

ಈ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೆಎಂಎಫ್, ಜಂಬೂ ಪ್ಯಾಕೇಟ್ ಹಾಲಿನ  ದರವನ್ನು 3 ರೂ ಹೆಚ್ಚಳ ಮಾಡಲಾಗುತ್ತಿದೆ. ದರ ಹೆಚ್ಚಳದ ಹಿನ್ನಲೆಯಲ್ಲಿ ನಂದಿನಿ ಜಂಬೂ ಪ್ಯಾಕೇಟ್ ಹಾಲಿನ ದರಗಳು ನಾಳೆಯಿಂದ 231 ರಿಂದ 234 ರೂಪಾಯಿಗೆ ಏರಿಕೆಯಾಗಲಿದೆ ಎಂದು ಹೇಳಿದೆ.

ನಂದಿನಿ ಜಂಬೂ ಪ್ಯಾಕೇಟ್ ಹಾಲು 6 ಲೀಟರ್ ಸಾಮರ್ಥ್ಯದ್ದಾಗಿದೆ. ಈ ದರವನ್ನು ಇಂದಿನಿಂದ ಜಾರಿಗೆ ಬರುವಂತೆ 3 ರೂ ಹೆಚ್ಚಿಸಿದ ಪರಿಣಾಮ 234 ರೂಪಾಯಿ ದರವನ್ನು ಇನ್ನು ಮುಂದೆ ಗ್ರಾಹಕರು ನೀಡಬೇಕು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments