ವಿಡಿಯೋ ಚಿತ್ರ 
ರಾಜ್ಯ

ಮೈಸೂರು-ಬೆಂಗಳೂರು ಹೆದ್ದಾರಿ, ವಂದೇ ಭಾರತ್ ರೈಲಿನ ವಿಡಿಯೋ: ಬೊಮ್ಮಾಯಿ ಟ್ವೀಟ್ ಗೆ ಮೋದಿ ಪ್ರತಿಕ್ರಿಯೆ

ನೂತನ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಕಾರಿಡಾರ್ ಕೆಳಗೆ ಸಾಗುವ ವಂದೇ ಭಾರತ್ ಎಕ್ಸ್  ಪ್ರೆಸ್ ರೈಲಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದರು. 

ಬೆಂಗಳೂರು: ನೂತನ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಕಾರಿಡಾರ್ ಕೆಳಗೆ ಸಾಗುವ ವಂದೇ ಭಾರತ್ ಎಕ್ಸ್  ಪ್ರೆಸ್ ರೈಲಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಕ್ಯಾಮರಾಮನ್ ಶ್ರೀರಾಮು ಅವರ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ಈ ಅದ್ಬುತ ದೃಶ್ಯದ ವಿಡಿಯೋವನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಟ್ವೀಟ್ ಮಾಡಿದ್ದರು. 

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಬೆಂಗಳೂರು- ಮೈಸೂರು ದಶಪಥ ಎಕ್ಸ್ ಪ್ರೆಸ್ ಹೆದ್ದಾರಿ ವಿಶ್ವದರ್ಜೆ ಗುಣಮಟ್ಟದ ಮೂಲಸೌಕರ್ಯ ಮತ್ತು ಕರ್ನಾಟಕದ ಅಭೂತಪೂರ್ವ ಬೆಳವಣಿಗೆಯನ್ನು ಬಿಂಬಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಡಬಲ್ ಎಂಜಿನ್ ಸರ್ಕಾರ ರಾಜ್ಯದಲ್ಲಿ ಅದ್ಬುತ ಕೆಲಸಗಳನ್ನು ಮಾಡುತ್ತಿದೆ ಎಂದು ಸಿಎಂ ಟ್ವೀಟ್ ನಲ್ಲಿ ಹೇಳಿದ್ದರು.

ಬೊಮ್ಮಾಯಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಜನರಿಗೆ ಉತ್ತಮ ಮೂಲಭೂತ ಸೌಕರ್ಯದ ಅವಶ್ಯಕತೆಯಿದೆ. ಅದನ್ನು ಒದಗಿಸಲು ನಮ್ಮ ಸರ್ಕಾರ ಶ್ರಮಿಸುತ್ತಿದೆ. ನಮ್ಮ ಯೋಜನೆಗಳು ಜಾಗತಿಕವಾಗಿ ಶ್ಲಾಘಿಸಲ್ಪಟ್ಟಿವೆ ಎಂದು ರೀಟ್ವೀಟ್ ಮಾಡಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯ ಹೈಡ್ರಾಮಕ್ಕೆ ತೆರೆ: ಬೆಳಗ್ಗೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ; ಮೇ 13ಕ್ಕೆ ಬಹುಮತ ಸಾಬೀತು

ತಮಿಳುನಾಡಿನ ನೂತನ ಸಿಎಂ ಆಗಿ TVK ಮುಖ್ಯಸ್ಥ ವಿಜಯ್ ಪದಗ್ರಹಣ ಸಮಾರಂಭಕ್ಕೆ Rahul Gandhi, ಹೊಸ ಮೈತ್ರಿಕೂಟ ರಚನೆ ಸಂಕೇತ!

ಗುಜರಾತ್ ಟೈಟನ್ಸ್‌ಗೆ ಸತತ 4ನೇ ಗೆಲುವು: 77 ರನ್‌ಗಳಿಂದ ರಾಜಸ್ಥಾನಕ್ಕೆ ಹೀನಾಯ ಸೋಲು, 4ನೇ ಸ್ಥಾನಕ್ಕೆ ಕುಸಿದ RCB!

ಪಾಕ್ ISI ಮಾಡ್ಯೂಲ್ ಬಯಲಾದ ಬೆನ್ನಲ್ಲೇ ಉಗ್ರ ದಾಳಿಯ ಬಗ್ಗೆ ಗುಪ್ತಚರ ಎಚ್ಚರಿಕೆ: ದೆಹಲಿಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಸಿಎಂ ಆಯ್ಕೆ ಕಗ್ಗಂಟು: ಮೂವರು ಘಟಾನುಘಟಿಗಳ ನೇರ ಹಣಾಹಣಿ, ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್!

SCROLL FOR NEXT