ಅಬ್ದುಲ್ ನಜೀರ್ 
ರಾಜ್ಯ

ಆಂಧ್ರ ನೂತನ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್ ನೇಮಕ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ

ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ...

ಬೆಂಗಳೂರು: ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ.

ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್‌. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ನಮ್ಮ ಮಂಗಳೂರಿನ ಬೆಳುವಾಯಿ ಗ್ರಾಮದ ಎಸ್.ಅಬ್ದುಲ್ ನಜೀರ್ ಅವರಿಗೆ ಅಭಿನಂದನೆಗಳು ಎಂದು ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಹ ಅಬ್ದುಲ್ ನಜೀರ್ ಅವರನ್ನು ಅಭಿನಂದಿಸಿದ್ದು, ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ಗಳಲ್ಲಿ ನ್ಯಾಯಾಧೀಶರಾಗಿ ಉತ್ತಮ ಸೇವೆ ಸಲ್ಲಿಸಿ, ಪ್ರಸ್ತುತ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿರುವ ಎಸ್‌. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ಗದ್ದಲ, ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!

ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

ಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!

VB-G RAM G ಯೋಜನೆಗೆ ಹಣದ ಕೊರತೆಯೇ ಇಲ್ಲ, ಗ್ರಾಮೀಣ ಉದ್ಯೋಗಕ್ಕೆ 2,900 ಕೋಟಿ ರೂ. ಬಿಡುಗಡೆ: ರಾಜ್ಯ ಸರ್ಕಾರ

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ ಡಿಕೆಶಿ ಧನ್ಯವಾದ