ಶೋಭಾ ಕರಂದ್ಲಾಜೆ 
ರಾಜ್ಯ

ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ; ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಯಕ್ಷಗಾನ ಕಲಿಸಬೇಕು- ಶೋಭಾ ಕರಂದ್ಲಾಜೆ

ಉಡುಪಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆಯೂ ನಡೆಯಿತು.

ಉಡುಪಿ: ಉಡುಪಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉಡುಪಿ ಮತ್ತು ಇಡೀ ಕರಾವಳಿ ಭಾಗವು ಈ ಭಾಗದ ಜೀವನಾಡಿಯಾಗಿರುವ ಯಕ್ಷಗಾನ ಮೇಳಗಳಿಗೆ ಸದಾ ಬೆಂಬಲ ನೀಡಿದೆ. ಯಕ್ಷಗಾನಕ್ಕೆ ಅಯಸ್ಕಾಂತೀಯ ಆಕರ್ಷಣೆ ಇದ್ದು, ಪುರಾಣ, ಜನಪದ ಸಾಹಿತ್ಯವನ್ನು ಅರ್ಥ ಮಾಡಿಕೊಳ್ಳಲು ಯುವಕು ಹೆಚ್ಚಿನ ಸಂಖ್ಯೆಯಲ್ಲಿ ಕಲಾ ಪ್ರಕಾರದತ್ತ ಆಕರ್ಷಿತರಾಗಬೇಕು ಎಂದರು.

ವಿದ್ಯಾರ್ಥಿಗಳು ತಮ್ಮ ಸಂಸ್ಕೃತಿ, ಇತಿಹಾಸ ಮತ್ತು ಪೌರಾಣಿಕ ಕಥೆಗಳ ಬಗ್ಗೆ ತಿಳಿದುಕೊಳ್ಳಲು ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಯಕ್ಷಗಾನವನ್ನು ಕಲಿಸಬೇಕು. ಯಕ್ಷಗಾನ ಕಲೆಯನ್ನು ಕೇವಲ ಧಾರ್ಮಿಕ ನೆಲೆಯಲ್ಲಿ ನೋಡಬಾರದು. ಕಲಾ ಪ್ರಕಾರದ ಶ್ರೀಮಂತ ಪರಂಪರೆಯನ್ನು ಉಳಿಸುವುದು ಅನಿವಾರ್ಯವಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆಯೂ ನಡೆಯಿತು.

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮಾಜಿಕ ಕಾರ್ಯಕರ್ತ ನಾಡೋಜ ಜಿ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ಯಕ್ಷಗಾನಕ್ಕೆ ಸಂಬಂಧಿಸಿದ ವಿವಿಧ ಮಳಿಗೆಗಳನ್ನು ತೆರೆಯಲಾಗಿದೆ. ಕಾರ್ಯಕ್ರಮದ ಅಧ್ಯಕ್ಷ ಎಂ ಪ್ರಭಾಕರ ಜೋಶಿ ಇದ್ದರು.

ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ಪ್ರೊ ಚಾನ್ಸೆಲರ್ ಎಚ್ ಎಸ್ ಬಲ್ಲಾಳ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ, ಕೇಂದ್ರ ಸಂಪುಟ ಅನುಮೋದನೆ

Pakistan Army ವಿರುದ್ಧ ತಿರುಗಿ ಬಿದ್ದ POK ಜನತೆ, ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video

Asia Cup 2025: BCCI ವಾಗ್ದಂಡನೆ ಎಚ್ಚರಿಕೆಗೆ ಹೆದರಿದ Mohsin Naqvi, UAE Boardಗೆ ಭಾರತದ ಟ್ರೋಫಿ ಹಸ್ತಾಂತರ: ವರದಿ

ಕೇಂದ್ರದಿಂದ ಬರ ಪರಿಹಾರ: ಕುಮಾರಸ್ವಾಮಿ ಹೇಳಿಕೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ, ಹೇಳಿದ್ದೇನು?

SCROLL FOR NEXT