ಸಚಿವ ಶ್ರೀರಾಮುಲು. 
ರಾಜ್ಯ

ಶೀಘ್ರದಲ್ಲೇ ಸಾರಿಗೆ ನೌಕರರ ವೇತನ ಪರಿಷ್ಕರಣೆ: ಸಚಿವ ಬಿ.ಶ್ರೀರಾಮುಲು

ಸಾರಿಗೆ ನೌಕರರಿಗೆ 7ನೇ ವೇತನ ಜಾರಿಗೆ ಕಷ್ಟವಾಗಬಹುದು. ಆದರೆ ವೇತನ ಪರಿಷ್ಕರಣೆಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಕಾರ್ಯ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಭರವಸೆ ನೀಡಿದರು.

ಚಿತ್ರದುರ್ಗ: ಸಾರಿಗೆ ನೌಕರರಿಗೆ 7ನೇ ವೇತನ ಜಾರಿಗೆ ಕಷ್ಟವಾಗಬಹುದು. ಆದರೆ ವೇತನ ಪರಿಷ್ಕರಣೆಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಕಾರ್ಯ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಭರವಸೆ ನೀಡಿದರು.

ಮೊಳಕಾಲ್ಮುರು ಪಟ್ಟಣದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ನಿರ್ಮಿಸಲಾಗುತ್ತಿರುವ ಮೊಳಕಾಲ್ಮುರು ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕು ಸ್ಥಾಪನೆ ಹಾಗೂ ಶಿಲಾನ್ಯಾಸ ನೆರವೇರಿಸಿ‌ ಸಚಿವರು ಮಾತನಾಡಿದರು.

ಸಾರಿಗೆ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಇಲಾಖೆಯ ಚಾಲಕರು, ನಿರ್ವಾಹಕರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಅವರ ಬಹಳ ದಿನ ಬೇಡಿಕೆಯಾದ 7ನೇ ವೇತನ ಆಯೋಗ ಜಾರಿ, ವೇತನ ಪರಿಷ್ಕರಣೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು,  ನೌಕರರಿಗೆ ಯಾವುದೇ ತೊಂದರೆಯಾಗಬಾರದೆಂದು ಮುಖ್ಯಮಂತ್ರಿಗಳು ರೂ. 6 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಮುಷ್ಕರದಲ್ಲಿ ಪಾಲ್ಗೊಂಡ ಸಸ್ಪೆಂಡ್ ಹಾಗೂ ಡಿಸ್ ಮಿಸ್  ಆದವರನ್ನೂ ಪುನಃ ನೇಮಕ ಮಾಡಿಕೊಳ್ಳುವ ಕೆಲಸ ಮಾಡಲಾಗಿದೆ ತಿಳಿಸಿದರು.

ಇಲಾಖೆಯು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿಯೂ 4 ನಿಗಮಗಳಲ್ಲಿ ಸುಮಾರು 3,500 ಬಸ್ ಗಳ ಖರೀದಿ ಮಾಡಲಾಗಿದೆ. 2030ರೊಳಗೆ ಎಲ್ಲ ಹಳೆಯ ಬಸ್ ಗಳನ್ನು ತೆಗೆದು ಸುಮಾರು 28 ಸಾವಿರ ಬಸ್ ಗಳನ್ನು ಖರೀದಿ ಮಾಡುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

SCROLL FOR NEXT