ಮಕ್ಕಳಿಬ್ಬರನ್ನು ಕೊಂದ ಆರೋಪಿ ನಿಂಗಪ್ಪ 
ರಾಜ್ಯ

ರಾಯಚೂರು: ಪತ್ನಿಯ ನಡತೆ ಮೇಲೆ ಶಂಕೆ, ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ಕ್ರೂರಿ ತಂದೆ!

ಪತ್ನಿಯ ನಡತೆ ಬಗ್ಗೆ ಅನುಮಾನದ ಕಣ್ಣುಗಳಿಂದ ನೋಡುತ್ತಿದ್ದ ವ್ಯಕ್ತಿಯೋರ್ವ ತನ್ನಿಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 

ರಾಯಚೂರು: ಪತ್ನಿಯ ನಡತೆ ಬಗ್ಗೆ ಅನುಮಾನದ ಕಣ್ಣುಗಳಿಂದ ನೋಡುತ್ತಿದ್ದ ವ್ಯಕ್ತಿಯೋರ್ವ ತನ್ನಿಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 

ದೇವದುರ್ಗದ ಜಕ್ಲೇರದೊಡ್ಡಿಯಲ್ಲಿ ಈ ದಾರುಣ ಘಟನೆ ನಡೆದಿದ್ದು ಹತ್ಯೆಗೀಡಾದ ಮಕ್ಕಳನ್ನು 5 ವರ್ಷದ ಶಿವರಾಜ್ ಮತ್ತು 3 ವರ್ಷದ ರಾಘವೇಂದ್ರ ಎಂದು ಗುರುತಿಸಲಾಗಿದೆ. 

ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ನಿಂಗಪ್ಪ ಎಂಬಾತ ಅತ್ತೆಯ ಮನೆಯಲ್ಲಿದ್ದ ಮಕ್ಕಳನ್ನು ಕರೆತಂದು ಕತ್ತು ಹಿಸುಕಿ ಕೊಂದಿದ್ದಾನೆ. ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ನಿಂಗಪ್ಪ ದಿನ ನಿತ್ಯ ಜಗಳವಾಡುತ್ತಿದ್ದ ಇದರಿಂದ ಬೇಸತ್ತ ಮಹಿಳೆ ಗಂಡನಿಂದ ದೂರವಾಗಿದ್ದಳು. ಕೊಲೆ ಪ್ರಕರಣ ಸಂಬಂಧ ಆರೋಪಿ ನಿಂಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡುವುದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!