ರಾಜ್ಯ

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023: ಬೆಂಗಳೂರಿಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

Nagaraja AB

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023  ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು.

ಹೆಚ್ಎಎಲ್‌ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಿಜೆಪಿ ಹಿರಿಯ ಮುಖಂಡ ಅರವಿಂದ ಲಿಂಬಾವಳಿ ಮತ್ತಿತರರು ರಾಜನಾಥ್ ಸಿಂಗ್ ಅವರನ್ನು  ಬರಮಾಡಿಕೊಂಡರು.

ಇದಕ್ಕೂ ಮುನ್ನಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿರುವುದಾಗಿ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದರು. 

ಏಷ್ಯಾದ ಅತಿದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ ನೀಡಲಿದ್ದಾರೆ.  ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ, ರಾಜಭವನದಲ್ಲಿ ತಂಗಲಿದ್ದಾರೆ. ಸೋಮವಾರ ರಾಜಭವನದಿಂದ ಹೆಲಿಕಾಪ್ಟರ್ ಮೂಲಕ ಯಲಹಂಕ ವಾಯುನೆಲೆಗೆ ತೆರಳುವರು. 

ಬೆಳಗ್ಗೆ 9-30 ರಿಂದ 11-30ರವರೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವೈಮಾನಿಕ ಪ್ರದರ್ಶನ ವೀಕ್ಷಿಸುವರು, ನಂತರ 11-45ಕ್ಕೆ ಅಲ್ಲಿಂದಲೇ ವಾಯುಪಡೆ ವಿಮಾನದಲ್ಲಿ ತ್ರಿಪುರಾಕ್ಕೆ ತೆರಳುವರು. 

SCROLL FOR NEXT