ಅರಮನೆ ಮೈದಾನದಲ್ಲಿ ಬೆಂಕಿ 
ರಾಜ್ಯ

ಬೆಂಗಳೂರು: ಅರಮನೆ ಮೈದಾನದಲ್ಲಿ ಅಗ್ನಿ ಅವಘಡ; 3 ಕಾರು ಬೆಂಕಿಗಾಹುತಿ

ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ಭಾನುವಾರ ನಡೆದಿದೆ.

ಭಾನುವಾರ ಮಧ್ಯಾಹ್ನ ಅರಮನೆ ಮೈದಾನದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಕಾರುಗಳು ಸುಟ್ಟು ಭಸ್ಮವಾಗಿದ್ದು ಇನ್ನೊಂದು ಕಾರು ಭಾಗಶಃ ಹಾನಿಯಾಗಿದೆ.

ಅರಮನೆ ಮೈದಾನದಲ್ಲಿರುವ ಕಿಂಗ್ಸ್ ಕೋರ್ಟ್‌ಗೆ ಹೊಂದಿಕೊಂಡಿರುವ ಪಾರ್ಕಿಂಗ್ ಸ್ಥಳದಲ್ಲಿ ಮಧ್ಯಾಹ್ನ 2.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

"ಪಾರ್ಕಿಂಗ್ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳು ಮತ್ತು ಒಣ ಎಲೆಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿದ್ದು, ಬಳಿಕ ಬೆಂಕಿ ಮೂರು ಕಾರುಗಳಿಗೆ ವ್ಯಾಪಿಸಿದೆ. ಮಹೀಂದ್ರಾ ಎಕ್ಸ್‌ಯುವಿ ಮತ್ತು ಮಾರುತಿ ಎರ್ಟಿಗಾ ಕಾರುಗಳು ಸಂಪೂರ್ಣವಾಗಿ ಸುಟ್ಟುಹೋಗಿದೆ ಮತ್ತು ಹ್ಯುಂಡೈ ಕ್ರೆಟಾ ಸುಮಾರು 25% ನಷ್ಟು ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಗರೇಟ್ ತುಂಡಿನಿಂದ ಬೆಂಕಿ
ಇನ್ನು ಇಲ್ಲಿ ಯಾರೋ ಸೇದಿ ಬಿಸಾಡಿ ಹೋದ ಸಿಗರೇಟ್ ತುಂಡಿನಿಂದ ಒಣ ತ್ಯಾಜ್ಯಕ್ಕೆ ಬೆಂಕಿ ಹೊತ್ತಿದ್ದು, ಅದು ಕಾರುಗಳಿಗೆ ವ್ಯಾಪಿಸಿರಬಹುದು ಎಂದು ಶಂಕಿಸಲಾಗಿದೆ. ಆದರೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್