ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಆತ್ಮಹತ್ಯೆಗೆ ಶರಣು

ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಅವರು ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.

ಬೆಳಗಾವಿ: ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಅವರು ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.

ಸದ್ಯ ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿಯಾಗಿರುವ ರೇಷ್ಮಾ ತಾಳಿಕೋಟಿ ಅವರು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಪತಿ ಜಾಫರ್ ಫಿರ್ಜಾದೆ ಅವರು ಬೆಳಗಾವಿಯ ಆಜಂ ನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ರೇಷ್ಮಾ ತಾಳಿಕೋಟಿ ಅವರು ಈ ಹಿಂದೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಜಾಫರ್ ಫಿರ್ಜಾದೆ ಅವರು ಅವರು ಇಂದು ಆಜಂ ನಗರದಲ್ಲಿರುವ ತಮ್ಮ ಸಹೋದರ ಆಸಿಫ್ ಅವರ ಮನೆಗೆ ತೆರಳಿ ಅಲ್ಲಿಯೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಾಫರ್ ಅವರು ಕಳೆದ ಕೆಲವು ತಿಂಗಳಿನಿಂದ ಡಿಪ್ರೆಶನ್ ಗೆ ಒಳಗಾಗಿದ್ದರು ಎನ್ನುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಚರ್ಚೆಗೆ ಅಮಿತ್ ಶಾ ಉತ್ತರಿಸುತ್ತಾರೆ, ಆದರೆ...: ಕಿರಣ್ ರಿಜಿಜು

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ