ಎಂಪಿ ಕುಮಾರಸ್ವಾಮಿ 
ರಾಜ್ಯ

ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. 

ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ  ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.

ಸಾಲ‌ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!