ಟ್ರಾಫಿಕ್ ದಂಡ 
ರಾಜ್ಯ

ಸಂಚಾರ ಉಲ್ಲಂಘನೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ, ನಾಳೆ ಅಧಿಕೃತ ಘೋಷಣೆ

ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಕುರಿತು ನಾಳೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟ್ರಾಫಿಕ್ ದಂಡ ಶೇ.50 ರಿಯಾಯಿತಿ ವಿಸ್ತರಿಸಲು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಬಗ್ಗೆ ಪತ್ರ ಬಂದಿದೆ. ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಕೂಡಾ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು. 

ಇನ್ನು ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ ಘೋಷಣೆ ಮಾಡಿದ್ದೇ ತಡ ವಾಹನ ಸವಾರರು ದಂಡ ಪಾವತಿಸುವುದಕ್ಕೆ ಸವಾರರು ಮುಗಿಬಿದ್ದಿದ್ದರು. ವಾಹನ ಸವಾರರು ಸರದಿ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದಾರೆ. ಬಹಳ ದಿನಗಳಿಂದ ಹಲವು ಕೇಸ್​ನೊಂದಿಗೆ ಸಾವಿರಾರು ರೂಪಾಯಿ ಬಾಕಿ ಉಳಿಸಿಕೊಂಡಿದ್ದವರು ಶೇ.50 ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. 

ಪೊಲೀಸ್ ಇಲಾಖೆ ಸಹ ರಿಯಾಯಿತಿ ನೀಡಿ ಸರ್ಕಾರದ ಬೊಕ್ಕಸ ತುಂಬಿಸಿದೆ. ಈ ಆಫರ್​ನಿಂದ 10 ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 122 ಕೋಟಿ ರೂ ಹರಿದು ಬಂದಿದ್ದು, ಸುಮಾರು 42 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಹೇಳಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧ ಭೀತಿ: ಅಮೆರಿಕಕ್ಕೆ Iran 'Deadline'.. Trumpಗೆ ಕತಾರ್ ಮೂಲಕ 7 ಷರತ್ತುಗಳ ರವಾನೆ, ಟೆಹ್ರಾನ್‌ ಇಟ್ಟ ಬೇಡಿಕೆಗಳೇನು..?

‘ನನ್ನ ಪತಿ ಮಾಡಿಸುವ ಕೆಲಸಗಳು'; Royal Enfield ಇ-ಬೈಕ್ ಏರಿದ ತೇಜಸ್ವಿ ಸೂರ್ಯ ಪತ್ನಿ Sivasri Skanda! Video

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರ ಬಯಸುತ್ತದೆ, ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!