ಸಿದ್ದರಾಮಯ್ಯ ಬಿ ಎಸ್ ಯಡಿಯೂರಪ್ಪ 
ರಾಜ್ಯ

ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿಯವರು ಕಡ್ಲೆಪುರಿ‌ ತಿಂತಿದ್ರಾ, ಯಡಿಯೂರಪ್ಪಗೆ ಅರಳು ಮರುಳು: ಸಿದ್ದರಾಮಯ್ಯ

ಬಿ.ಎಸ್.ಯಡಿಯೂರಪ್ಪಗೆ ವಯಸ್ಸಿನಿಂದ ಅರಳು ಮರುಳಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪಗೆ ವಯಸ್ಸಿನಿಂದ ಅರಳು ಮರುಳಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿದ್ದಾರೆ. ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ತರಾತುರಿ ಟೆಂಡರ್ ಕರೆದು ಭ್ರಷ್ಟಾಚಾರ ನಡೆದಿದೆ ಎಂದು ಪತ್ರ ಬರೆದಿದ್ದಾರೆ. ಕಾಂಗ್ರೆಸ್​​ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ‌ ನಡೆಸಲಿ. ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿಯವರು ಕಡ್ಲೆಪುರಿ‌ ತಿಂತಿದ್ರಾ? ಸರ್ಕಾರ ಅಲ್ಪಾವಧಿಯಲ್ಲಿ ಟೆಂಡರ್​ ನೀಡುತ್ತಿರುವ ಉದ್ದೇಶ ಏನು? ಹಣ ನೀಡಿದವರಿಗೆ ಮಾತ್ರ ಬಿಲ್​ ಮಂಜೂರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ತರಾತುರಿ ಟೆಂಡರ್ ಕರೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಮಾಡಿದ್ದ ಆರೋಪಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು. ತಲೆ ತಿರುಕರು ಹೀಗೆ ಮಾತಾಡೋದು. ತಲೆ ಸರಿ ಇದ್ದವರು ಯಾರೂ ಕೂಡ ಈ ರೀತಿ ಮಾತಾಡಲ್ಲ. ಅಧಿಕಾರದ ಭ್ರಮೆಯಿಂದ ನಾವು ಅಧಿಕಾರಕ್ಕೆ ಬಂದೆ ಬಿಟ್ಟಿದ್ದೇವೆಂದು ಹೀಗೆ ಹುಚ್ಚುಚ್ಚಾಗಿ ಮಾತಾಡ್ತಿದ್ದಾರೆ. ಇವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದನ್ನು ಸದನದಲ್ಲಿ ಅವರು ಮಾತಾಡಲಿ. ಅದಕ್ಕೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ‌ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್