ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪ 
ರಾಜ್ಯ

ಅಕ್ರಮದ ಬಗ್ಗೆ ದಾಖಲೆ ಕೊಡಲಿ, ತನಿಖೆ ಮಾಡಿಸುತ್ತೇವೆ: ಸಿಎಂ; ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು: ಯಡಿಯೂರಪ್ಪ

ಬಿಜೆಪಿ ಸರ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಟೆಂಡರ್ ಅಕ್ರಮ ನಡೆಯುತ್ತಿದೆ ಎಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಟೆಂಡರ್ ಅಕ್ರಮ ನಡೆಯುತ್ತಿದೆ ಎಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ ಗಾಳಿಯಲ್ಲಿ ಗುಂಡು ಹಾರಿಸುತ್ತಿದೆ, ತಮ್ಮ ಅಡಳಿತದ ಅನುಭವವನ್ನು ಹೇಳುತ್ತಿದೆ. ಎಲ್ಲಿ ಅಕ್ರಮ ಆಗಿದೆ, ಯಾರು ಅಕ್ರಮ ಮಾಡಿದ್ದಾರೆ, ದಾಖಲೆ ಸಮೇತ ಎಲ್ಲವನ್ನೂ ನಮ್ಮ ಮುಂದಿಡಲಿ. ಎಲ್ಲಿಗೆ ಬೇಕಾದರೂ ದೂರು ಕೊಡಲಿ, ತನಿಖೆ ಮಾಡಿಸಲು ನಾವು ರೆಡಿ ಇದ್ದೇವೆ ಎಂದು ಹೇಳಿದ್ದಾರೆ.

ಡಿ ಕೆ ಶಿವಕುಮಾರ್ ಮೇಲೆ ಎಂತಹ, ಯಾವೆಲ್ಲಾ ಆರೋಪಗಳಿವೆ ಎಂಬುದು ಎಲ್ಲರಿಗೂ ಗೊತ್ತಿದೆ, ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡು ರಕ್ಷಿಸಿಕೊಳ್ಳಲಿ ಎಂದು ತಿರುಗೇಟು ಕೊಟ್ಟರು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು, ತಲೆ ತಿರುಕರು ಈ ರೀತಿ ಮಾತನಾಡುತ್ತಾರೆಂದರು. 

ತಲೆ ಸರಿ ಇದ್ದವರು ಈ ರೀತಿ ಮಾತನಾಡೋದಿಲ್ಲ, ಅಧಿಕಾರದ ಭ್ರಮೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಅಂತಾ ಕನಸು ಕಾಣ್ತಿದ್ದಾರೆ. ಕಾಂಗ್ರೆಸ್​ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಸದನದಲ್ಲಿ ಕಾಂಗ್ರೆಸ್​ನವರು ಪ್ರಸ್ತಾಪ ಮಾಡಲಿ, ಅದಕ್ಕೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್