ಐಟಿ ದಾಳಿ 
ರಾಜ್ಯ

ಜೆಡಿಎಸ್ ನಾಯಕ ಪ್ರಭಾಕರ್ ರೆಡ್ಡಿ ನಿವಾಸದ ಮೇಲೆ ಐಟಿ ದಾಳಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಫೆ.15 ರಂದು ಜೆಡಿಎಸ್ ನಾಯಕ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಫೆ.15 ರಂದು ಜೆಡಿಎಸ್ ನಾಯಕ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 

ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಮೈಲಸಂದ್ರದಲ್ಲಿರುವ ನಿವಾಸದ ಮೇಲೆ ಐಟಿ ದಾಳಿ ನಡೆದಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ, ಕೋಣನಕುಂಟೆಯಲ್ಲಿರುವ ಫ್ಲಾಟ್ ಮೇಲೆಯೂ ದಾಳಿ ನಡೆದಿದೆ. 

ಪ್ರಭಾಕರ ರೆಡ್ಡಿ ರಿಲಯ್ ಎಸ್ಟೇಟ್ ಉದ್ಯಮಿಯಾಗಿದ್ದು, ಈ ಹಿಂದೆಯೂ ಹಲವು ಬಾರಿ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು, ವಿಧಾನಸಭಾ ಚುನಾವಣೆ-2023 ರಲ್ಲಿ ಪ್ರಭಾಕರ ರೆಡ್ಡಿ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. 

ಪ್ರಭಾಕರ್ ರೆಡ್ಡಿ ಉದ್ಯಮಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ಮಹತ್ವ ಪಡೆದುಕೊಂಡಿದ್ದರೆ, ಚುನಾವಣೆ ಸಂದರ್ಭದಲ್ಲಿ ಇಂತಹ ದಾಳಿಗಳು ಸಾಮಾನ್ಯ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!