ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

ಬಿಜೆಪಿ ಸರ್ಕಾರದಿಂದ ಟೆಂಡರ್ ಹಗರಣ, ಸಾವಿರಾರು ಕೋಟಿ ರೂಪಾಯಿ ಲೂಟಿ: ಕಾಂಗ್ರೆಸ್ ನಾಯಕರ ಆರೋಪ

ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಚಟುವಟಿಕೆಗಳು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ, ಆರೋಪ ಮಾಡುವ ಪ್ರತಿಪಕ್ಷಗಳ ತಂತ್ರ ಮುಂದುವರಿದಿದೆ. ಇಂದು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದರು.

ಬೆಂಗಳೂರು: ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಚಟುವಟಿಕೆಗಳು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ, ಆರೋಪ ಮಾಡುವ ಪ್ರತಿಪಕ್ಷಗಳ ತಂತ್ರ ಮುಂದುವರಿದಿದೆ. ಇಂದು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದರು.

ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಹಿಂದಿನಿಂದಲೂ ಭ್ರಷ್ಟಾಚಾರ, 40 ಪರ್ಸೆಂಟ್ ಕಮಿಷನ್ ಆರೋಪವಿದೆ. ಗುತ್ತಿಗೆ ಕಾಮಗಾರಿಯಲ್ಲಿ ಸಚಿವರು, ಶಾಸಕರು ಗುತ್ತಿಗೆದಾರರಿಂದ ಶೇಕಡಾ 40ರವರೆಗೆ ಕಮಿಷನ್ ಪಡೆಯುತ್ತಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಈ ಹಿಂದೆ ಆರೋಪಿಸಿದ್ದರು. ಈ ಆರೋಪದ ಮೇಲೆ ಕೆ ಎಸ್ ಈಶ್ವರಪ್ಪ ಸಚಿವ ಸ್ಥಾನ ಕಳೆದುಕೊಂಡರು. ಗುತ್ತಿಗೆದಾರರ ಸಂಘದ ಆರೋಪಕ್ಕೆ ಕಾಂಗ್ರೆಸ್ ಬೆಂಬಲವಿದೆ. 

ಇಂದು ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ತುರ್ತು ಸುದ್ದಿಗೋಷ್ಠಿ ಕರೆದು ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಆರೋಪಗಳ ಸುರಿಮಳೆಗೈದರು. 

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ರಾಜ್ಯದ ಬೊಕ್ಕಸವನ್ನು ಸರ್ಕಾರವೇ ಲೂಟಿ ಮಾಡ್ತಿದೆ, ಯದ್ವಾತದ್ವಾ ಎಲ್ಲಾ ಪ್ರಾಜೆಕ್ಟ್​ ಗಳಿಗೆ ಒಪ್ಪಿಗೆ ನೀಡುತ್ತಿದ್ದಾರೆ. ಜನರ ತೆರಿಗೆ ಹಣ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ. ಟೆಂಡರ್​ ಹಣ ಹೆಚ್ಚು ಮಾಡಿದ್ರೆ ಹೆಚ್ಚು ಕಮಿಷನ್​​ ನೀಡುತ್ತಿದ್ದಾರೆಂದು ಗುಡುಗಿದರು. 

ಮಂತ್ರಿಗಳು ಹೆಚ್ಚು ಕಮಿಷನ್​ ಕೊಡುವವರಿಗೆ ಗುತ್ತಿಗೆ ಕೊಡುತ್ತಿದ್ದಾರೆ. 40 ಪರ್ಸೆಂಟ್​ ಕಮಿಷನ್​​ ಹಗರಣದ ಮುಂದುವರೆದ ಭಾಗ ಇದು. ಕಾಂಟ್ರಾಕ್ಟರ್​​, ಅಧಿಕಾರಿಗಳಿಗೆ ವಾರ್ನ್​​ ಮಾಡ್ತಿದ್ದೇನೆ. ನಾವು ಇದನ್ನು ಲಾಜಿಕಲ್​ ಎಂಡ್​ಗೆ ತಗೆದುಕೊಂಡು ಹೋಗುತ್ತೇವೆ. ಕಾಂಟ್ರಾಕ್ಟರ್​​​ಗಳು, ಅಧಿಕಾರಿಗಳ ವಿರುದ್ಧ ಕ್ರಿಮಿನಲ್​ ಮೊಕದ್ದಮೆ ಹಾಕ್ತೀವಿ. ಯಾರನ್ನೂ ಬಿಡಲ್ಲ, ಎಲ್ಲರನ್ನೂ ಜೈಲಿಗೆ ಹಾಕ್ತೀವಿ. ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ಕಾಮಗಾರಿಗಳ ತನಿಖೆ ಮಾಡಿಸ್ತೇವೆ. ಅಧಿಕಾರಕ್ಕೆ ಬಂದ ತಕ್ಷಣ 40% ಕಮಿಷನ್​ ಹಗರಣ ತನಿಖೆ ಮಾಡಿಸುತ್ತೇವೆ ಎಂದರು.

ಒಂದೇ ದಿನದಲ್ಲಿ 18,000 ಕೋಟಿ ಬಿಲ್​ ಆಗಿದೆ. ಬಿಜೆಪಿ ಎಂಎಲ್​ಎ ಗೂಳಿಹಟ್ಟಿ ಶೇಖರ್​ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಲೆಕ್ಷನ್​ ಫಂಡ್ ರೈಸ್ ಮಾಡಲು ಟೆಂಡರ್​ ಹಗರಣ ಮಾಡುತ್ತಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯಿಂದ ಸಾವಿರಾರು ಕೋಟಿ ಟೆಂಡರ್​ ಅಕ್ರಮ ಬಯಲಿಗೆ ಬಂದಿದೆ ಎಂದು ಹೊಸ ಬಾಂಬ್ ಸಿಡಿಸಿದರು.

ಅಸಮಾಧಾನಿತ ಶಾಸಕರ ಸಮಾಧಾನಕ್ಕೆ ಟೆಂಡರ್​ ಹಣವಿದ್ದು,  ಮಂತ್ರಿ ಸ್ಥಾನ ಸಿಗದವರಿಗೆ ಟೆಂಡರ್​ ಆಫರ್​​​​ ನೀಡಿದ್ದಾರೆ. ಇದು ಅಂತಿಂಥ ಹಗರಣವಲ್ಲ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ.  ವಸೂಲಿ ಹಣದಲ್ಲಿ ಎಲೆಕ್ಷನ್​​​ ಮಾಡಲು ಹೊರಟಿದ್ದಾರೆಂದು ಸರ್ಕಾರದ ವಿರುದ್ಧ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಾಗ್ದಾಳಿ ನಡೆಸಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ಆಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT