ಕಾಂಗ್ರೆಸ್ ನಾಯಕರಿಂದ ದೂರು 
ರಾಜ್ಯ

ಟಿಪ್ಪು ಸುಲ್ತಾನ್ ಗೆ ಹೋಲಿಸಿ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಕಾಂಗ್ರೆಸ್ ಮುಖಂಡರಿಂದ ಪೊಲೀಸರಿಗೆ ದೂರು

‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕೋಣ’ ಎಂಬ ಹೇಳಿಕೆಗೆ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಕೇಸ್​ ದಾಖಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಠಾಣೆಗೆ ಕಾಂಗ್ರೆಸ್ ಮುಖಂಡರು ಇಂದು ತೆರಳಿ ದೂರು ಸಲ್ಲಿಸಿದ್ದಾರೆ.

ಬೆಂಗಳೂರು: ‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕೋಣ’ ಎಂಬ ಹೇಳಿಕೆಗೆ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಕೇಸ್​ ದಾಖಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಠಾಣೆಗೆ ಕಾಂಗ್ರೆಸ್ ಮುಖಂಡರು ಇಂದು ತೆರಳಿ ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ದೂರು ದಾಖಲಾಗಿದೆ. ಡಾ ಅಶ್ವಥ್ ನಾರಾಯಣ ವಿರುದ್ಧ ಹೋರಾಟ, ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜಾಗಿದೆ. ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಪ್ರತಿಭಟನೆ ಮಾಡುವುದಲ್ಲದೆ ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಬಳಗ ದೂರು ದಾಖಲಿಸಿದೆ.

ನಾಯಕರೇ ಈ ರೀತಿ ಮಾತನಾಡಿದ ಮೇಲೆ ಸಿದ್ದರಾಮಯ್ಯನವರ ಜೀವಕ್ಕೆ ಅಪಾಯವಿದೆ. ಅವರಿಗೆ ಭದ್ರತೆ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು, ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಇದರ ಜೊತೆಗೆ ಟಿಪ್ಪು ಸುಲ್ತಾನ್, ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕವಾಗಿ, ಆಕ್ರೋಶಭರಿತರಾಗಿ ಭಾಷಣ ಮಾಡುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೂಡ ಕಾಂಗ್ರೆಸ್ ನಾಯಕರು ಇದೇ ಸಂದರ್ಭದಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ