ಪ್ರಾತಿನಿಧಿಕ ಚಿತ್ರ 
ರಾಜ್ಯ

ದಾವಣಗೆರೆ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತರೇ ಟ್ರಕ್ ಚಾಲಕರ ದರೋಡೆಯಲ್ಲಿ ತೊಡಗಿದ್ದರು!

ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಾವಣಗೆರೆ: ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸರು ಹಾಗೂ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಪ್ರಕರಣವನ್ನು ಭೇದಿಸಿ ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಸಂತ್ರಸ್ತರ ಮೂವರು ಸಹಚರರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಮೃತರು ಆರು ಸದಸ್ಯರ ದರೋಡೆಕೋರರ ತಂಡದ ಭಾಗವಾಗಿದ್ದರು. ಲಾರಿ ಚಾಲಕರನ್ನು ದರೋಡೆ ಮಾಡಲು ಎರಡು ಬೈಕ್‌ಗಳಲ್ಲಿ ಹೋಗಿದ್ದರು. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತು ಅಪರಾಧ ಕೃತ್ಯ ಎಸಗುತ್ತಿದ್ದರು.
ಮೂವರು ದರೋಡೆಕೋರರನ್ನು ಕೊಂದ ಟ್ರಕ್ ಚಾಲಕನನ್ನು ಉತ್ತರ ಪ್ರದೇಶದ ಭೋಲೆ ಯಾದವ್ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ದರೋಡೆ ತಂಡದ ಭಾಗವಾಗಿದ್ದ ಮೃತ ವ್ಯಕ್ತಿಗಳ ಸಹಚರರಾದ ನಾಗರಾಜ್, ಗಣೇಶ್ ಮತ್ತು ರಾಹುಲ್ ಎಂಬುವವರನ್ನು ಬಂಧಿಸಲಾಗಿದೆ. ಘಟನೆ ನಡೆದಾಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೇ ಟ್ರಕ್ ಚಾಲಕನಿಂದ ಅಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರು. ಘಟನೆ ನಂತರ ಅವರೂ ತಲೆಮರೆಸಿಕೊಂಡಿದ್ದರು.

ಮೃತರು ಟ್ರಕ್ ಚಾಲಕ ಭೋಲೆ ಯಾದವ್‌ಗೆ ಬೆದರಿಕೆ, ಹಲ್ಲೆ ನಡೆಸಿದ್ದಾರೆ. 8 ಸಾವಿರ ಸುಲಿಗೆ ಮಾಡಿ ಮೊಬೈಲ್ ಮತ್ತಿತರ ವಸ್ತುಗಳನ್ನು ದೋಚಿದ್ದಾರೆ. ಈ ಘಟನೆಯಿಂದ ಕುಪಿತಗೊಂಡ ಆರೋಪಿ ಟ್ರಕ್ ಚಾಲಕ ಎರಡು ಬೈಕ್‌ಗಳಲ್ಲಿ ತೆರಳುತ್ತಿದ್ದ ದರೋಡೆಕೋರರ ತಂಡವನ್ನು ಹಿಂಬಾಲಿಸಿ, ಒಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಟ್ ಅಂಡ್ ರನ್ ಪ್ರಕರಣ ಶನಿವಾರ (ಫೆಬ್ರುವರಿ 10) ಬೆಳಕಿಗೆ ಬಂದಿತ್ತು. ಅನಗೋಡ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ಸಮೀಪದ ರಾಮನಗರ ನಿವಾಸಿಗಳಾದ 24 ವರ್ಷದ ಪರಶುರಾಮ್, 23 ವರ್ಷದ ಸಂದೇಶ್ ಮತ್ತು 26 ವರ್ಷದ ಶಿವು ಸ್ಥಳದಲ್ಲೇ ಮೃತಪಟ್ಟಿದ್ದರು.

ಇದಕ್ಕೂ ಮುನ್ನ ಯುವಕರು ಕಾಟಿಹಳ್ಳಿ ಗ್ರಾಮಕ್ಕೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿ, ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದರು ಎಂದು ಕುಟುಂಬಸ್ಥರು ಸಮರ್ಥಿಸಿಕೊಂಡಿದ್ದರು.

ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಜನರ ಹೇಳಿಕೆಗಳನ್ನು ಸಹ ಸಂಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT