ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ನಿವೃತ್ತ ಸರ್ಕಾರಿ ನೌಕರರ ಮನೆಯ ದರೋಡೆ ಮಾಡಿದ್ದ ನೇಪಾಳದ ಐವರ ಬಂಧನ

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ನೇಪಾಳದ ಐವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜಯನಗರ 5ನೇ ಬ್ಲಾಕ್‌ನಲ್ಲಿರುವ ದೂರುದಾರರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಾಗ ಬಂಧಿಸಲಾಗಿದೆ. 

ಬೆಂಗಳೂರು: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ನೇಪಾಳದ ಐವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜಯನಗರ 5ನೇ ಬ್ಲಾಕ್‌ನಲ್ಲಿರುವ ದೂರುದಾರರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಾಗ ಬಂಧಿಸಲಾಗಿದೆ. ಐವರಲ್ಲಿ, ಇಬ್ಬರು ಆರೋಪಿಗಳು ಪತಿ-ಪತ್ನಿಯರಂತೆ ನಟಿಸಿ ಹದಿನೈದು ದಿನಗಳ ಹಿಂದೆ ಸಂತ್ರಸ್ತರ ನಿವಾಸದಲ್ಲಿ ಮನೆಗೆಲಸದವರಾಗಿ ಸೇರಿಕೊಂಡಿದ್ದರು.

ಅಪರಾಧ ನಡೆದ ಎರಡು ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ಬ್ರಾಂಡೆಡ್ ವಾಚ್‌ಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಲೀಕನ ಅನುಪಸ್ಥಿತಿಯಲ್ಲಿ ಕಳ್ಳತನ ಮಾಡಿದ್ದಾರೆ.

ಆರೋಪಿಗಳನ್ನು ಬಿಕಾಸ್ (23), ಸುಶ್ಮಿತಾ (22), ಹೃದಮ್ ಅಲಿಯಾಸ್ ಹೇಮಂತ್ (21), ರೋಷನ್ ಪದಮ್ (27) ಮತ್ತು ಪ್ರೇಮ್ (31) ಎಂದು ಗುರುತಿಸಲಾಗಿದೆ.

ಬಿಕಾಸ್ ಮತ್ತು ಸುಶ್ಮಿತಾ ಪತಿ-ಪತ್ನಿಯಾಗಿ ನಟಿಸಿದ್ದು, ನಿವೃತ್ತ ಸರ್ಕಾರಿ ನೌಕರ ಎಚ್‌ಎಸ್ ಒಬೆದುಲ್ಲಾ ಖಾನ್ ಅವರ ನಿವಾಸದಲ್ಲಿ ಮನೆಕೆಲಸಗಾರರಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಸೋಮವಾರ ಮಧ್ಯಾಹ್ನ ಈ ತಂಡ ಕಳ್ಳತನ ನಡೆಸಿತ್ತು. ಮನೆಗೆ ಹಿಂದಿರುಗಿದ ಖಾನ್ ಕಳ್ಳತನ ಮತ್ತು ಕಾಣೆಯಾದ ‘ದಂಪತಿ’ ಬಗ್ಗೆ ತಿಳಿದುಕೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಆರೋಪಿಗಳು ಲಾರಿಯಲ್ಲಿ ಪರಾರಿಯಾಗಲು ಯೋಜಿಸುತ್ತಿದ್ದಾಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ಪೈಕಿ ಹೃದಮ್‌ನನ್ನು ಐದು ವರ್ಷಗಳ ಹಿಂದೆ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆಗ ಅಪ್ರಾಪ್ತನಾಗಿದ್ದ ಆರೋಪಿ, ಬೊಮ್ಮನಹಳ್ಳಿಯಲ್ಲಿ ತನ್ನ ಆತ್ಮೀಯ ಗೆಳೆಯನನ್ನು ಕೊಂದು ಜೈಲಿನಿಂದ ಹೊರ ಬಂದಿದ್ದ. ನಂತರ ಆತ ಇತರ ಆರೋಪಿಗಳೊಂದಿಗೆ ಸೇರಿಕೊಂಡಿದ್ದ. ಈ ತಂಡ ಮನೆಗೆಲಸದವರನ್ನು ಹುಡುಕುತ್ತಿರುವ ಬಗ್ಗೆ ತಿಳಿದುಕೊಳ್ಳುತ್ತಿದ್ದರು. ಈ ವೇಳೆ ಮನೆಗೆಲಸದವರನ್ನು ಹುಡುಕುತ್ತಿದ್ದ ದೂರುದಾರರು ಆರೋಪಿಗಳ ಸಂಪರ್ಕಕ್ಕೆ ಬಂದಿದ್ದಾರೆ. ಅವರ ಪೂರ್ವಾಪರಗಳನ್ನು ಪರಿಶೀಲಿಸದೆ ಕೆಲಸಕ್ಕೆ ನೇಮಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದರು. 

ಐವರಲ್ಲಿ ಹೃದಮ್‌ನನ್ನು ಬುಧವಾರ ಬಂಧಿಸಲಾಗಿದೆ. ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT