ಸೌಮ್ಯಾ ರೆಡ್ಡಿ. 
ರಾಜ್ಯ

ಮಾಜಿ ಕಾರ್ಪೊರೇಟರ್‌ಗಳ ಪ್ರತಿಭಟನೆ ಚುನಾವಣಾ ತಂತ್ರವಷ್ಟೇ: ಶಾಸಕಿ ಸೌಮ್ಯಾ ರೆಡ್ಡಿ

ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ 4 ವರ್ಷ 9 ತಿಂಗಳಿಂದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದಕ್ಕೆ ಶಾಸಕಿ ಸೌಮ್ಯಾ ರೆಡ್ಡಿಯೇ ಮೂಲ ಕಾರಣವೆಂದು ಬಿಜೆಪಿ ಕಾರ್ಯಕರ್ತರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ 4 ವರ್ಷ 9 ತಿಂಗಳಿಂದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದಕ್ಕೆ ಶಾಸಕಿ ಸೌಮ್ಯಾ ರೆಡ್ಡಿಯೇ ಮೂಲ ಕಾರಣವೆಂದು ಬಿಜೆಪಿ ಕಾರ್ಯಕರ್ತರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಯನಗರದ ವಿಜಯ ಕಾಲೇಜು ಮುಂಭಾಗದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕರು ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಸಿ.ಕೆ.ರಾಮಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸೌಮ್ಯ ರೆಡ್ಡಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

''ಜಯನಗರದ ವಾಣಿಜ್ಯ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಶಿಥಿಲಗೊಂಡಿದ್ದು, ಆ ಪ್ರದೇಶಗಳನ್ನು ಅಭಿವೃದ್ಧಿಪಡಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ. ಅಲ್ಲದೆ, ಬೈರಸಂದ್ರ ವಾರ್ಡ್‌ನ ಭೋವಿ ಕಾಲೋನಿಯಲ್ಲಿ ಸಮುದಾಯ ಭವನಕ್ಕೆ 6 ಕೋಟಿ ರೂ. ಮಂಜೂರು ಮಾಡಲಾಗಿತ್ತು, ಆದರೆ ವರ್ಕ್ ಆರ್ಡರ್ ಇದ್ದರೂ ಕಾಮಗಾರಿ ನಡೆಯಲೇ ಇಲ್ಲ. ಸಾರಕ್ಕಿ ಮತ್ತು ಶಾಕಾಂಬರಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳಿಲ್ಲ' ಎಂದು ರಾಮಮೂರ್ತಿ ಅವರು ಆರೋಪಿಸಿದರು.

ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸೌಮ್ಯಾ ರೆಡ್ಡಿಯವರು, ಚುನಾವಣೆಗಳು ಬರುತ್ತಿದ್ದಂತೆ ಪ್ರತಿಭಟನೆಗಳ ನಡೆಸುವುದು ಸಾಮಾನ್ಯ. ಈ ಪ್ರತಿಭಟನೆ ಕೂಡ ಚುನಾವಣಾ ತಂತ್ರವಷ್ಟೇ. ಜಯನಗರ ಕ್ಷೇತ್ರಕ್ಕೆ ಮೀಸಲಿಟ್ಟಿದ್ದ ಶೇ.61ರಷ್ಟು ಹಣವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದಾಗ ಏಕೆ ಅವರು ಪ್ರತಿಭಟಿಸಲಿಲ್ಲ? ನನ್ನ ಬಳಿ ಇರುವ ಹಣದಿಂದ ನಾನು ಅಭಿವೃದ್ಧಿ ಕೆಲಸಗಳನ್ನು ಮಾಡಿಸಬೇಕಿದೆ. ಈ ಬಗ್ಗೆ ನಾಗರಿಕರನ್ನು ನೀವು ಕೇಳಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಟೆಂಡರ್ ಶ್ಯೂರ್ ಮತ್ತು ಜಯನಗರ ಕಾಂಪ್ಲೆಕ್ಸ್ ನಂತಹ ವಿವಿಧ ವಿಷಯಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆಂದು ತಿಳಿಸಿದರು.

ಬೈರಸಂದ್ರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ಎನ್.ನಾಗರಾಜ್ ಮಾತನಾಡಿ, ಜಯನಗರ ಮತ್ತು ವಾಣಿಜ್ಯ ಸಂಕೀರ್ಣಕ್ಕೆ ಸಂಬಂಧಿಸಿಕ ಕೆಲಸಗಳ ಮಾಡಿಸಿಕೊಡಲು ಶಾಸಕರು ಕೆಲವು ವರ್ಷಗಳಿಂದ ಹರಸಾಹಸ ಪಡುತ್ತಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT