ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ಕಾರು - ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ ತಾಲೂಕಿನ ಸೈದಾಪುರ ಬಳಿ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ  ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಾದಗಿರಿ: ಯಾದಗಿರಿ ತಾಲೂಕಿನ ಸೈದಾಪುರ ಬಳಿ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ  ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಸಂಜೆ ಸೈದಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ತೆಲಂಗಾಣದ ಗದ್ವಾಲ್ ಮೂಲದ ಸೈಫುಲ್ಲಾ (40) ಹಾಗೂ ಜ್ಞಾನೇಶ್ವರ(35) ಮೃತ ದುರ್ದೈವಿಗಳು.

ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸೈಫುಲ್ಲಾ ಹಾಗೂ ಜ್ಞಾನೇಶ್ವರ ಇಬ್ಬರೂ ಗದ್ವಾಲ್‌ನಿಂದ ಕಲಬುರಗಿಗೆ ಸೀರೆ ವ್ಯಾಪಾರಕ್ಕೆ ಹೊರಟಿದ್ದರು. ಇನ್ನು ಲಾರಿ ಕಲಬುರಗಿಯಿಂದ ತಮಿಳುನಾಡಿಗೆ ಹೋಗುತ್ತಿತ್ತು ಎನ್ನಲಾಗಿದೆ.

ಸ್ಥಳಕ್ಕೆ‌ ಸೈದಾಪುರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!