ಸುಂದರೇಶ್ 
ರಾಜ್ಯ

ಬೆಂಗಳೂರು: ಕಾಡ್ಗಿಚ್ಚು ನಂದಿಸುವ ವೇಳೆ ಗಾಯಗೊಂಡಿದ್ದ ಗಾರ್ಡ್ ಸುಂದರೇಶ್ ಸಾವು

ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಅವರು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ...

ಬೆಂಗಳೂರು: ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಅವರು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅರಣ್ಯಾಧಿಕಾರಿಗಳಾದ ಮಂಜುನಾಥ್, ಗಾರ್ಡ್ ಗಳಾದ ಸುಂದರೇಶ್ ಮತ್ತು ತುಂಗೇಶ್ ಅವರು ಕಾಡ್ಗಿಚ್ಚು ನಂದಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶೇ. 80 ರಷ್ಟು ಸುಟ್ಟ ಗಾಯಗಳಾಗಿದ್ದ ಸುಂದರೇಶ್‌ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಝೀರೋ ಟ್ರಾಫಿಕ್‌ನಲ್ಲಿ ಸುಂದರೇಶ್‌ ಹಾಗೂ ಮಂಜುನಾಥ್ ಅವರನ್ನು ಬೆಂಗಳೂರಿಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಸುಂದರೇಶ್ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಸುಂದರೇಶ್‌ ಅವರ ಮೃತದೇಹಕ್ಕೆ ಹಾಸನದ ಅರಣ್ಯ ಇಲಾಖೆಯಿಂದ ಗೌರವಾರ್ಪಣೆ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಕಳುಹಿಸಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ