ಕುಸುಮಾ ಟ್ವೀಟ್- ರೋಹಿಣಿ ಸಿಂಧೂರಿ 
ರಾಜ್ಯ

ನಿಮ್ಮ ಕರ್ಮ ನಿಮ್ಮನ್ನು ಬಿಡುವುದಿಲ್ಲ: ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಆರೋಪದ ಬೆನ್ನಲ್ಲೇ ಡಿ.ಕೆ ರವಿ ಪತ್ನಿ ಟ್ವೀಟ್

ಐಪಿಎಸ್ ಅಧಿಕಾರಿ ಡಿ ರೂಪ ಸರಣಿ ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಟ್ವೀಟ್ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. 

ಬೆಂಗಳೂರು: ಕರ್ನಾಟಕದಲ್ಲಿ ಐಎಎಸ್ vs ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪ ಸರಣಿ ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಟ್ವೀಟ್ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. 

ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ರೂಪಾ ಮೌದ್ಗಿಲ್ ಅವರು ಡಿ.ಕೆ ರವಿ ಸಾವಿನ ಪ್ರಕರಣವನ್ನು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ ರವಿ ಪತ್ನಿ ಟ್ವೀಟ್ ಮಹತ್ವ ಪಡೆದುಕೊಂಡಿದೆ. 

ಕೇವಲ ಒಂದು ಸಾಲಿನಲ್ಲಿ ಟ್ವೀಟ್ ಮಾಡಿರುವ ಡಿ.ಕೆ ರವಿ ಪತ್ನಿ, “ Karma will get back at you , sooner or later it surely will ” (ನಿಧಾನವಾಗಿ ಅಥವಾ ವೇಗವಾಗಿ, ಒಟ್ಟಿನಲ್ಲಿ ಕರ್ಮ ನಿಮ್ಮನ್ನು ಬಿಡುವುದಿಲ್ಲ) ಎಂದು ಮಾರ್ಮಿಕವಾಗಿ ಬರೆದಿದ್ದಾರೆ.
 
ಡಿ.ಕೆ ರವಿ, ಐಎಎಸ್‌, ಸಂಭಾವಿತ ವ್ಯಕ್ತಿ. ಸಿಬಿಐ ರಿಪೋರ್ಟ್‌ನಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಎಲ್ಲೆ ಮೀರಿ ಮೆಸೇಜ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಆದರೆ ರೋಹಿಣಿ, ಡಿ.ಕೆ ರವಿ ಅವರನ್ನು ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ. ಡಿ.ಕೆ. ರವಿ ತೀರಿ ಹೋದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ, ಐಪಿಎಸ್ ಅಧಿಕಾರಿ ಎನ್‌ ಹರೀಶ್ ಅವರ ಜತೆ ರೋಹಿಣಿ ಮದುವೆಯಾಗಲಿದ್ದಾರೆ ಎಂಬ ವಿಚಾರ ಹರಿದಾಡಿತ್ತು. ಆದರೆ, ಆತ, ಈಕೆಗಾಗಿ ಕಾದು ಕಾದು ಆತ್ಮಹತ್ಯೆ ಮಾಡಿಕೊಂಡದ್ದು, ಎಂದು ಹಲವರು ಹೇಳಿದರೂ, ನಾನು ಅದನ್ನು ನಂಬಲಿಲ್ಲ, ಈಗೂ ನಂಬಿಲ್ಲ ಎಂದು ರೂಪಾ ಮೌದ್ಗಿಲ್  ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT