ರೂಪಾ ಮೌದ್ಗಿಲ್-ರೋಹಿಣಿ ಸಿಂಧೂರಿ(ಸಂಗ್ರಹ ಚಿತ್ರ) 
ರಾಜ್ಯ

ರೂಪಾ-ರೋಹಿಣಿ ಜಗಳ: ನೊಟೀಸ್ ಜಾರಿ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಬೊಮ್ಮಾಯಿ ಸೂಚನೆ

ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪವಾಗಿ ಜಗಳ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಸಾಮಾನ್ಯ ಮನುಷ್ಯರು ಹಾದಿಮಧ್ಯೆ ಜಗಳ ಮಾಡುವಂತೆ ವಿದ್ಯಾವಂತ ಉನ್ನತ ಅಧಿಕಾರಿಗಳು ಈ ರೀತಿ ಸಾರ್ವಜನಿಕವಾಗಿ ಕಿತ್ತಾಡುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ.

ಬೆಂಗಳೂರು: ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪವಾಗಿ ಜಗಳ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಸಾಮಾನ್ಯ ಮನುಷ್ಯರು ಹಾದಿಮಧ್ಯೆ ಜಗಳ ಮಾಡುವಂತೆ ವಿದ್ಯಾವಂತ ಉನ್ನತ ಅಧಿಕಾರಿಗಳು ಈ ರೀತಿ ಸಾರ್ವಜನಿಕವಾಗಿ ಕಿತ್ತಾಡುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಈ ನಿಟ್ಟಿನಲ್ಲಿ ಇಬ್ಬರಿಗೂ ನೊಟೀಸ್ ನೀಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವರಿಬ್ಬರ ಜಗಳ ನಿನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದ್ದು ಹಲವು ವಿಷಯಗಳು ಪ್ರಸ್ತಾಪವಾಗಿದೆ. ವೈಯಕ್ತಿಕವಾಗಿ ಇವರಿಬ್ಬರಿಗೆ ಭಿನ್ನಾಭಿಪ್ರಾಯಗಳಿದ್ದರೆ ಏನಾದರೂ ಮಾಡಿಕೊಳ್ಳಲಿ, ಅಥವಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕಾಗಿತ್ತು. ಆದರೆ ಈ ರೀತಿ ಸಾರ್ವಜನಿಕವಾಗಿ ಕಿತ್ತಾಡಿಕೊಳ್ಳುವುದು ಸರಿಯಲ್ಲ, ಇದನ್ನು ನೋಡಿಕೊಂಡು ಸರ್ಕಾರ ಸುಮ್ಮನೆ ಕೂರುವುದಿಲ್ಲ, ಇಬ್ಬರಿಗೂ ನೊಟೀಸ್ ಜಾರಿ ಮಾಡಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಆರಂಭದಲ್ಲಿ ನೊಟೀಸ್ ನೀಡುತ್ತೇವೆ, ಆದರೂ ಇವರ ಜಗಳ ಮುಂದುವರಿದರೆ ಮುಂದೆ ಏನು ಕ್ರಮ ಕೈಗೊಳ್ಳಬೇಕು ಎಂದು ನಿರ್ಧಾರ ಮಾಡುತ್ತೇವೆ ಎಂದರು. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಇಬ್ಬರೂ ಮಹಿಳಾ ಅಧಿಕಾರಿಗಳಿಗೆ ನೊಟೀಸ್ ನೀಡುವಂತೆ ಆದೇಶ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT