ಆರಗ ಜ್ಞಾನೇಂದ್ರ 
ರಾಜ್ಯ

ಐಎಎಸ್-ಐಪಿಎಸ್ ಮಹಿಳಾ ಅಧಿಕಾರಿಗಳ ವಾಕ್ಸಮರ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ಗೃಹ ಸಚಿವರು

ಕರ್ನಾಟಕದಲ್ಲಿ ಇಬ್ಬರು ಹಿರಿಯ ಐಎಎಸ್ ಮತ್ತು ಐಪಿಎಸ್ ಮಹಿಳಾ ಅಧಿಕಾರಿಗಳ ನಡುವಿನ ವಾಕ್ಸಮರ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕವಾಗಿ ಬಹಿರಂಗವಾಗಿ ಜಗಳ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಇಬ್ಬರು ಹಿರಿಯ ಐಎಎಸ್ ಮತ್ತು ಐಪಿಎಸ್ ಮಹಿಳಾ ಅಧಿಕಾರಿಗಳ ನಡುವಿನ ವಾಕ್ಸಮರ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕವಾಗಿ ಬಹಿರಂಗವಾಗಿ ಜಗಳ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಲ್ಲಿ ಐಜಿಪಿ, ಎಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಚಿನ್ನದ ಪದಕ ಪಡೆದ ಐಪಿಎಸ್ ಅಧಿಕಾರಿ ಡಿ.ರೂಪ ಮೌದ್ಗಿಲ್ ಅವರು ತೀರಾ ವೈಯಕ್ತಿಕ ರೀತಿಯಲ್ಲಿ ಜಗಳವಾಡುತ್ತಿದ್ದಾರೆ. 

"ಸರ್ಕಾರವು ಈ ಬೆಳವಣಿಗೆಗಳನ್ನು ನೋಡಿ ಕಣ್ಣು ಮುಚ್ಚಿ ಕುಳಿತಿಲ್ಲ. ಇಂತಹ ನಡವಳಿಕೆಯನ್ನು ಸರ್ಕಾರದ ಅಧಿಕಾರಿಗಳಾಗಿ ಸಾರ್ವಜನಿಕರ ಮುಂದೆ ತೋರಿಸುವುದು ಅಪರಾಧವಾಗಿದೆ. ಖಾಸಗಿ ವಿಷಯಗಳನ್ನು ಸಾರ್ವಜನಿಕ ವೇದಿಕೆಗೆ ಎಳೆಯಲಾಗುತ್ತಿದೆ. ಮಾಧ್ಯಮಗಳ ಮುಂದೆ ಅವರ ಕ್ರಮಗಳು ಸಹ ಸರಿಯಲ್ಲ ಎಂದು ಸಚಿವರು ಹೇಳಿದರು.

ಜನರು ಇಂತಹ ಅಧಿಕಾರಿಗಳನ್ನು ದೇವಮಾನವರೆಂದು ಭಾವಿಸಿ ಪೂಜಿಸುತ್ತಾರೆ.ಇಬ್ಬರೂ ಅಧಿಕಾರಿಗಳ ವರ್ತನೆ ನೋಡಿದರೆ ಬೆಚ್ಚಿ ಬೀಳುತ್ತದೆ.ಅವರ ವರ್ತನೆಯಿಂದ ಒಳ್ಳೆಯ ಅಧಿಕಾರಿಗಳಿಗೆ ಅವಮಾನವಾಗುತ್ತಿದೆ.ಮಾನವೀಯ ಭಾವನೆ ಇಲ್ಲದವರೂ ಇಂತಹ ಕೃತ್ಯಗಳಲ್ಲಿ ತೊಡಗಬಹುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಡಿಜಿ ಅವರೊಂದಿಗೆ ಮಾತನಾಡಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

"ಅವರು ಸಾರ್ವಜನಿಕವಾಗಿ ಮಾತನಾಡುತ್ತಿರುವ ರೀತಿ ಅನಪೇಕ್ಷಿತವಾಗಿದೆ. ಈ ವಿಷಯದ ಬಗ್ಗೆ ಮುಖ್ಯಮಂತ್ರಿಗೆ ತಿಳಿದಿದೆ. ಇದು ಅತ್ಯಂತ ಖಂಡನೀಯ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು."

ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ಅವರ ವೈಯಕ್ತಿಕ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ರೋಹಿಣಿಯವರು ಕೆಲವು ಹಿರಿಯ ಐಎಎಸ್ ಅಧಿಕಾರಿಗಳಿಗೆ ತಮ್ಮ ಫೋಟೋಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

2015ರಲ್ಲಿ ಐಎಎಸ್ ಅಧಿಕಾರಿ ಡಿಕೆ ಆತ್ಮಹತ್ಯೆ ಪ್ರಕರಣವನ್ನೂ ರೂಪಾ ಮೌದ್ಗಿಲ್ ತರಾಟೆಗೆ ತೆಗೆದುಕೊಂಡಿದ್ದರು. ರವಿಯವರು ಮೆಸೇಜ್ ಮಾಡುತ್ತಿದ್ದಾಗ ರೋಹಿಣಿಯವರು ಏಕೆ ತಡೆಯಲಿಲ್ಲ ಎಂದು ಪ್ರಶ್ನಿಸಿದ್ದಾರೆ. ರವಿ ಸಿಂಧೂರಿಯನ್ನು ಪ್ರೀತಿಸುತ್ತಿದ್ದು, ಆಕೆಗಾಗಿಯೇ ತನ್ನ ಜೀವನವನ್ನೇ ಅಂತ್ಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. 

ಈ ಇಬ್ಬರೂ ಅಧಿಕಾರಿಗಳು ತಮ್ಮ ಧೈರ್ಯ ಮತ್ತು ರಾಜಕಾರಣಿಗಳ ವಿರುದ್ಧ ಬಗ್ಗದ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿರುವುದರಿಂದ, ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಇಬ್ಬರು ಅಧಿಕಾರಿಗಳ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈಗ ಬಿಸಿ ಬಿಸಿ ಚರ್ಚೆಯಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT